ಗುಬ್ಬಿ: ತಾಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡಗಳನ್ನು ನೀಡುವುದರ ಮೂಲಕ ಆಚರಣೆ ಮಾಡಲಾಯಿತು.
ಕಾರ್ಯಕ್ರಮದ ಬಗ್ಗೆ ಕಾಲೇಜು ಮತ್ತು ಪ್ರೌಢಶಾಲಾ ಮಕ್ಕಳಿಗೆ ಯೋಜನೆಯ ಕೃಷಿ ಮೇಲ್ವಿಚಾರಕರಾದ ರಘುರಾಜು ಮಾತನಾಡಿ, ಪರಿಸರ ಸಂರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಲು ಪ್ರತಿಯೊಬ್ಬರೂ ಒಂದೊಂದು ಗಿಡ-ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಪರಿಸರ ಉಳಿವಿಗಾಗಿ ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅವರ ಸಲಹೆ ಸೂಚನೆ ಮೇರೆಗೆ ಪ್ರತಿಯೊಂದು ತಾಲೂಕನ ವಿವಿಧ ಕಡೆ 2,000 ಗಿಡಗಳನ್ನು ನೆಡಲಾಗಿದೆ. ಶಾಲಾ ಮಕ್ಕಳಿಗೆ ದತ್ತು ನೀಡಿ ಪಾಲನೆ-ಪೋಷಣೆ ಮಾಡಿ ಬೆಳೆಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಚಲದೊರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಿದ್ದಗಂಗಮ್ಮ , ಉಪಾಧ್ಯಕ್ಷರಾದ ಕವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪ್ರಸಾದ್, ಬಸವರಾಜು, ಮುಖ್ಯ ಶಿಕ್ಷಕರಾದ ಚೇತನ್, ಗ್ರಾಮ ಪಂಚಾಯತಿ ಸದಸ್ಯರು, ಶಾಲೆ ಮತ್ತು ಕಾಲೇಜಿನ ಶಿಕ್ಷಕ ವೃಂದದವರು, ಊರಿನ ಗಣ್ಯರು ಸಂಘದ ಸದಸ್ಯರು ಸೇವಾ ಪ್ರತಿನಿಧಿಗಳಾದ ಲಲಿತಮ್ಮ ಮತ್ತು ಹಸೀನಾ ಬಾನು ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz