ಪ್ರವಾದಿ ಮುಹಮ್ಮದ್ ಅವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿ ಅಮಾನತ್ತು ಗೊಂಡಿರುವ ಬಿಜೆಪಿ ನಾಯಕಿ ನೂಪರ್ ಶರ್ಮಾ ವಿರುದ್ದ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ಪ್ರವಾದಿ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ ಪ್ರಚೋದನಾತ್ಮಕ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶರ್ಮಾ ವಿರುದ್ಧ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡನೇ ಎಫ್‌ಐಆರ್‌ನಲ್ಲಿ ಬಿಜೆಪಿಯ ನವೀನ್ ಜಿಂದಾಲ್, ಪತ್ರಕರ್ತೆ ಸಾಬಾ ನಖ್ವಿ ಮತ್ತು ಇತರ ಕೆಲವರ ಹೆಸರಿದ್ದು, ಇಬ್ಬರನ್ನೂ ವಿಶೇಷ ಘಟಕ ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.ಎಫ್‌ಐಆರ್‌ನಲ್ಲಿ ನದೀಮ್, ಅಬ್ದುರ್ ರೆಹಮಾನ್, ಗುಲ್ಜಾರ್ ಅನ್ಸಾರಿ ವ್ಯಕ್ತಿಗಳನ್ನು ಹೆಸರಿಸಲಾಗಿದೆ, ದೆಹಲಿ ಪೊಲೀಸರು ಆರೋಪಿಗಳಿಗೆ ಸಮನ್ಸ್ ಕಳುಹಿಸುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
“ದ್ವೇಷದ ಭಾಷಣ ಮಾಡುವ , ವಿವಿಧ ಗುಂಪುಗಳು ಹಾಗು ಪ್ರಚೋದಿಸುವ ಮತ್ತು ಸಾರ್ವಜನಿಕ ನೆಮ್ಮದಿಯ ನಿರ್ವಹಣೆಗೆ ಹಾನಿಕಾರಕ ಸನ್ನಿವೇಶಗಳನ್ನು ಸೃಷ್ಟಿಸುವವರ ವಿರುದ್ಧ ದೆಹಲಿ ಪೊಲೀಸರು ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಅನೇಕ ವ್ಯಕ್ತಿಗಳ ವಿರುದ್ಧದ ಎಫ್‌ಐಆರ್ ದಾಖಲು ಮಾಡಲಾಗಿದೆ. ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಸುಳ್ಳು ಮತ್ತು ತಪ್ಪು ಮಾಹಿತಿಯನ್ನು” ಪ್ರಚಾರ ಮಾಡುವಲ್ಲಿ ವಿವಿಧ ಸಾಮಾಜಿಕ ಮಾಧ್ಯಮ ಘಟಕಗಳ ಪಾತ್ರವನ್ನು ತನಿಖೆ ಮಾಡಲಾಗುತ್ತಿದೆ ಎಂದು ಕೂಡ ತಿಳಿಸಲಾಗಿದೆ.
ನೂಪುರ್ ಶರ್ಮಾ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಈ ಹಿಂದೆ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಸಂದೇಶ ಕಳುಹಿಸಿದವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB