nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    • ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ
    • ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ
    • ನಾಗರಹೊಳೆ–ಬಂಡೀಪುರ ಸಫಾರಿ ಬಂದ್ ಮಾಡಿ, ಕಾರ್ಯಾಚರಣೆ ನಡೆಸಿ: ಸಚಿವ ಖಂಡ್ರೆ ಸೂಚನೆ
    • ಮೈಸೂರು: ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
    • ಸರಿಯಾದ ಸಮಯಕ್ಕೆ ಬಾರದ ಪಿಡಿಓ– ಕಂಪ್ಯೂಟರ್ ಆಪರೇಟರ್: ಹಾಜರಾತಿ ಹಾಕುತ್ತಿರುವ ವಾಟರ್ ಮ್ಯಾನ್ !
    • ತುಮಕೂರು ಜಿಲ್ಲಾ ಆಸ್ಪತ್ರೆ ಖಾಸಗೀಕರಣ ಕೈಬಿಡಲು ಪ್ರಗತಿಪರ ಮತ್ತು ನಾಗರಿಕ ಸಂಘಟನೆಗಳ ಒಕ್ಕೊರಲ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ: ಹೆಚ್.ಡಿ. ಕುಮಾರಸ್ವಾಮಿ
    ರಾಜ್ಯ ಸುದ್ದಿ June 11, 2022

    ಕಾಂಗ್ರೆಸ್ ಜೊತೆ ಮೈತ್ರಿ ಮುಗಿದ ಅಧ್ಯಾಯ: ಹೆಚ್.ಡಿ. ಕುಮಾರಸ್ವಾಮಿ

    By adminJune 11, 2022No Comments2 Mins Read
    h d kumaraswamy

    ಬೆಂಗಳೂರು, ಜೂ. ೧೦- ರಾಜ್ಯದಲ್ಲಿ ಬಿಜೆಪಿಯ ಬಿ ಟೀಮ್ ಸಿದ್ದರಾಮಯ್ಯ ಎಂಬುದು ರಾಜ್ಯಸಭಾ ಚುನಾವಣೆಯಿಂದ ಜಗಜ್ಜಾಹೀರಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇನ್ನು ಮುಂದೆ ಕಾಂಗ್ರೆಸ್ ಜತೆ ಯಾವತ್ತೂ ಮೈತ್ರಿ ಇಲ್ಲ. ಡೋರ್ ಕ್ಲೋಸ್ ಎಂದಿದ್ದಾರೆ.ರಾಜ್ಯಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂಬ ಮನವಿಗೆ ಕಾಂಗ್ರೆಸ್ ಸ್ಪಂದಿಸಿಲ್ಲ.

    ಈ ಚುನಾವಣೆಯ ಮೂಲಕ ರಾಜ್ಯದಲ್ಲಿ ಬಿಜೆಪಿಯ ಬಿ ಟೀಮ್ ಸಿದ್ದರಾಮಯ್ಯ ಎನ್ನುವುದು ಜಗಜ್ಜಾಹೀರಾಗಿದೆ ಎಂದರು.ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಜೆಡಿಎಸ್‌ಗೆ ೨ನೇ ಪ್ರಾಶಸ್ತ್ಯ ಮತ ನೀಡಿದ್ದರೂ ಸಾಕಾಗಿತ್ತು. ಆದರೆ ಅವರು ಬಿಜೆಪಿಯನ್ನು ಗೆಲ್ಲಿಸಲು ನಮಗೆ ಬೆಂಬಲ ನೀಡಿಲ್ಲ. ಜನ ಎಲ್ಲವನ್ನು ತೀರ್ಮಾನ ಮಾಡುತ್ತಾರೆ ಎಂದರು.


    Provided by
    Provided by

    ಇನ್ನು ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜತೆ ಮೈತ್ರಿಗೆ ಹೋಗಲ್ಲ. ಮೈತ್ರಿ ಎಂಬುದು ಮುಗಿದ ಅಧ್ಯಾಯ. ನಾಳೆಯಿಂದ ರಾಜ್ಯದಲ್ಲಿ ಹೊಸ ಇತಿಹಾಸ ಆರಂಭವಾಗಲಿದೆ ಎಂದರು.ಜೆಡಿಎಸ್‌ನ ೩೨ ಶಾಸಕರ ಪೈಕಿ ೩೧ ಶಾಸಕರು ಜೆಡಿಎಸ್ ಅಭ್ಯರ್ಥಿ ಕುಪೇಂದ್ರರೆಡ್ಡಿಯವರಿಗೆ ಮತ ಹಾಕುತ್ತಾರೆ. ರಮೇಶ್‌ಕುಮಾರ್ ಮತ್ತು ಸಿದ್ದರಾಮಯ್ಯ ಸೇರಿ ಶ್ರೀನಿವಾಸಗೌಡ ಅವರನ್ನು ಕಾಂಗ್ರೆಸ್‌ಗೆ ಮತ ಹಾಕುವಂತೆ ಮನವೊಲಿಸಿದ್ದಾರೆ. ಅವರು ಸಹ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ಹೇಳಿದ್ದಾರೆ. ಹಾಗಾಗಿ ಒಂದು ಮತ ಅಡ್ಡಮತದಾನವಾಗಬಹುದು ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಶ್ರೀನಿವಾಸಗೌಡರಿಂದ ಮತ ಹಾಕಿಸಿಕೊಂಡರೆ ಏನು ಪ್ರಯೋಜನ. ಅವರ ಎರಡನೇ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುತ್ತಾರಾ. ಬಿಜೆಪಿಗೆ ನೆರವಾಗಲು ಇವೆಲ್ಲಾ ಮಾಡುತ್ತಿದ್ದಾರೆ ಎಂದರು.
    ಮಾಜಿ ಸಚಿವ ಈಶ್ವರಪ್ಪ ಸಿದ್ದರಾಮಯ್ಯನವರ ನೆರವಿನಿಂದ ಬಿಜೆಪಿ ಮೂರನೇ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಈಗಾಗಲೇ ಹೇಳಿದ್ದಾರೆ. ಹಾಗೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಹ ಕಾಂಗ್ರೆಸ್ ಶಾಸಕಾಂಗ ಕಚೇರಿಗೆ ತೆರಳಿ ಸಿದ್ದರಾಮಯ್ಯನವರನ್ನು ಅಭಿನಂದಿಸಿದ್ದಾರೆ. ಇವೆಲ್ಲ ಸಿದ್ದರಾಮಯ್ಯ ಬಿಜೆಪಿಯ ಬಿ ಟೀಮ್ ಎನ್ನುವುದನ್ನು ಜಗಜ್ಜಾಹೀರಾತು ಮಾಡಿದೆ ಎಂದರು.

    ಸಿದ್ದರಾಮಯ್ಯ ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಈ ಹಿಂದೆ ಜೆಡಿಎಸ್ ರಾಜ್ಯಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾಗ ಸಿದ್ದರಾಮಯ್ಯನವರು ಜೆಡಿಎಸ್‌ನ ೮ ಶಾಸಕರ ಅಡ್ಡಮತದಾನ ಮಾಡಿಸಿ ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಸೋಲಿಸಿದ್ದರು. ಇವರಿಗೆ ಅಲ್ಪಸಂಖ್ಯಾತರ ಪರವಾಗಿ ಮಾತನಾಡುವ ನೈತಿಕತೆ ಇದೆಯೇ ಎಂದು ವಾಗ್ದಾಳಿ ನಡೆಸಿದರು.

    ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸಗೌಡ ಅವರು ಅಡ್ಡಮತದಾನ ಮಾಡಿದರೆ ಅವರ ವಿರುದ್ಧ ಅನರ್ಹತೆ ಅಸ್ತ್ರ ಬಳಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಈ ಹಿಂದೆ ಜೆಡಿಎಸ್‌ನ ೮ ಶಾಸಕರು ಅಡ್ಡಮತದಾನ ಮಾಡಿದ್ದರು. ಅವರ ವಿರುದ್ಧ ಏನು ಕ್ರಮ ಆಗಲಿಲ್ಲ. ಪಕ್ಷಾಂತರ ಕಾಯ್ದೆ ಕಾನೂನಿಗಷ್ಟೆ ಇದೆ. ಕ್ರಮ ಜರುಗಿಸಲು ಆಗಲ್ಲ. ಆದರೆ ಜನ ಶ್ರೀನಿವಾಸಗೌಡರವರಿಗೆ ಪಾಠ ಕಲಿಸುತ್ತಾರೆ. ಹಿಂದೆ ಅಡ್ಡಮತದಾನ ಮಾಡಿದ್ದ ಶಾಸಕರಿಗೆ ಜನ ಪಾಠ ಕಲಿಸಿದ್ದಾರೆ ಎಂದರು.ಜೆಡಿಎಸ್ ಪಕ್ಷ ಏನೇ ಆದರೂ ಇಂತಹದ್ದಕ್ಕೆಲ್ಲ ಹೆದರುವುದಿಲ್ಲ. ಮತ್ತೆ ಪುಟಿದೇಳುತ್ತದೆ. ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗಲಿದ್ದು, ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಅಸ್ಮಿತೆಯ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮತಗಳ್ಳತನ: ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಡಿ.ಕೆ. ಶಿವಕುಮಾರ್

    November 7, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ

    November 8, 2025

    ಬೀದರ್: ಜಿಲ್ಲೆಯ ಗದಗ ನಗರದಲ್ಲಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸ್ಯಾಟ್‌…

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ಕುಣಿಗಲ್ | ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ: ಜೆಡಿಎಸ್ ಕಿಡಿ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.