ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಎಂಬ ವದಂತಿ ಹರಿದಾಡ್ತಿದೆ. ಈ ಬಗ್ಗೆ ಗುಣರಂಜನ್ ಶೆಟ್ಟಿ ಕೂಡ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಹಿರಿಯ ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ತಯಾರಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಕೊಲೆಗೆ ಸ್ಕೆಚ್ ಎಂಬ ಸುದ್ದಿ ಹರಿದಾಡ್ತಿದೆ. ಆದರೆ ಮನ್ಮಿತ್ ರೈ ವಿದೇಶದಲ್ಲಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಇನ್ನೂ ಗುಣರಂಜನ್ ಕೊಲೆಗೆ ಸ್ಕೆಚ್ ಸಂಬಂಧಿಸಿದಂತೆ ಬಂಟ್ವಾಳದ ಮುತ್ತಪ್ಪ ರೈ ಆಪ್ತ ರಾಕೇಶ್ ಮಲ್ಲಿಯನ್ನ ಮಂಗಳೂರು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ರಾಕೇಶ್ ಮಲ್ಲಿ ಹಾಗೂ ಮನ್ಮಿತ್ ಆಪ್ತರಾಗಿದ್ದು, ಇದೇ ವಿಚಾರಕ್ಕೆ ಪೊಲೀಸರು ಕರೆಸಿ ವಿಚಾರಣೆ ಮಾಡಿದ್ದಾರೆ. ರೈ ಬದುಕಿದ್ದಾಗ ಒಟ್ಟಿಗೆ ಇದ್ದ ರಾಕೇಶ್ ಮಲ್ಲಿ, ಮನ್ಮಿತ್ ಹಾಗೂ ಗುಣರಂಜನ್ ಶೆಟ್ಟಿ ರೈ ಸಾವಿನ ನಂತರ ದೂರಾಗಿದ್ದರು.
ರೈ ಸಾವಿನ ನಂತರ ಡಾನ್ ಪಟ್ಟಕ್ಕೇರಲು, ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಬೇಕು ಅನ್ನೋ ನಿಟ್ಟಿನಿಲ್ಲ ದೊಡ್ಡ ತಲೆ ಉರುಳಿಸುವ ಸ್ಕೆಚ್ ಹಾಕಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಗುಣರಂಜನ್ ಶೆಟ್ಟಿ ಜಯ ಕರ್ನಾಟಕ ಸಂಘಟನೆಯಿಂದ ಹೊರ ಬಂದು ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿದರು. ಅಷ್ಟೇ ಅಲ್ಲದೇ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರನಾಗಿರುವ ಗುಣರಂಜನ್ ಶೆಟ್ಟಿ ಮಂಗಳೂರು ಮತ್ತು ಬೆಂಗಳೂರು ಭಾಗದಲ್ಲಿ ಹೆಸರು ಮಾಡಿದ್ದಾರೆ. ಜೊತೆಗೆ ಮುತ್ತಪ್ಪ ರೈ ಆಪ್ತವಲಯದಲ್ಲಿ ಗುರುಸಿಕೊಂಡಿದ್ರು. ಈ ಕಾರಣಕ್ಕೆ ಗುಣರಂಜನ್ ಶೆಟ್ಟಿ ಕೊಲೆ ಮಾಡಿದ್ರೆ ದೊಡ್ಡ ಮಟ್ಟದ ಹೆಸರು ಮಾಡಬಹುದೆಂದು ಈ ಕೊಲೆಗೆ ಸ್ಕೆಚ್ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಇನ್ನೂ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ವಿಚಾರವಾಗಿ ಇಂದು ಗೃಹಮಂತ್ರಿಗಳಿಗೂ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದ್ದು ಆರೋಪಿಗಳನ್ನ ಶೀಘ್ರವಾಗಿ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


