ತುಮಕೂರು: ಜಿಲ್ಲೆಯ, ತುರುವೇಕೆರೆ ಪಟ್ಟಣದಲ್ಲಿರುವ ಬೆಮೆಲ್, ಕಚೇರಿಯಲ್ಲಿ ಮಾಜಿ ವಿಧಾನ ಪರಿಷತ್ತಿನ ,ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯ್ತಿ, ಮಾಡಿಹಳ್ಳಿ ಗ್ರಾಮ ಪಂಚಾಯ್ತಿ ,ಆನೆಕೆರೆ ಗ್ರಾಮ ಪಂಚಾಯಿತಿಗೆ ಸೇರಿದ ಹಲವು ಮಹಿಳೆಯರು ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಬೆಮೆಲ್ ಕಾಂತರಾಜು, ಕಳೆದ ನಾಲ್ಕು ವರ್ಷಗಳಿಂದ ಬೇರೆ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಜನರ ಸೇವೆಗಾಗಿ ತೊಡಗಿದ್ದೇನೆ.,ಮುಂದಿನ ದಿನಗಳಲ್ಲಿ ತಮ್ಮನ್ನು ನನ್ನೊಂದಿಗೆ ನಮ್ಮೆಲ್ಲರನ್ನು ಕೊಂಡೊಯ್ಯುತ್ತೇನೆ, ಪಕ್ಷವನ್ನು ಉತ್ತಮ ರೀತಿಯಲ್ಲಿ ಬೆಳೆಸೋಣ, ಕಳೆದ ಬಾರಿ ಆದ ಸಣ್ಣ ಎಡವಟ್ಟಿನಿಂದ ಕಾಂಗ್ರೆಸ್ ಪಕ್ಷದ ಮತಗಳು ಬಿಜೆಪಿ ಪಕ್ಷದ ಪಾಲಾಗಿ ಹೋದವು. ಆದರೆ ಈಗ ನಾನು ಪ್ರವಾಸ ಮಾಡಿದ ಪ್ರತಿ ಹಳ್ಳಿಗಳಲ್ಲೂ 40ರಿಂದ 50 ಜನ ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ನಮ್ಮ ಪಕ್ಷವು ಬಹಳ ಸದೃಢವಾಗಿದೆ ಎಂದರು.
ತಮ್ಮ ಗ್ರಾಮಗಳಲ್ಲಿ ಸಣ್ಣ ಪುಟ್ಟ ಗ್ರಾಮ ಕಾರ್ಯಕ್ರಮಗಳು ಆದಾಗ ನಮಗೆ ತಿಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ. ನಿಮ್ಮ ಸಹಕಾರ ಸದಾ ನನಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೀಡಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲಿದೆ. ನಿಮ್ಮೆಲ್ಲರಿಗೂ ಮುಂದೆ ಒಳ್ಳೆಯಯ ಭವಿಷ್ಯ ಇದೆ ಎಂದರು.
ಕಾರ್ಯಕ್ರಮವನ್ನು ಕೊಂಡಜ್ಜಿ ಕುಮಾರ್ ನಿರೂಪಿಸಿದರು. ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿಕಾಂತ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೊಡಗಿಹಳ್ಳಿ ಹನುಮಂತಯ್ಯ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀದೇವಮ್ಮ, ಮಾಯಸಂದ್ರ ಸುಬ್ರಹ್ಮಣ್ಯ ಮತ್ತಿತರರು ಹಾಜರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz