ತುಮಕೂರು: ತೋಟವೊಂದರಲ್ಲಿ ಮರ ಕಡಿಯಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಂಭವಿಸಿದೆ.
ಹೊಸಪಾಳ್ಯ ಗ್ರಾಮದ 45 ವರ್ಷ ವಯಸ್ಸಿನ ಲೋಕೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಗೊಲ್ಲರಹಟ್ಟಿಯ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಅವರು, ಮರಗಳ ಕೊಂಬೆ ಕತ್ತರಿಸುತ್ತಿದ್ದು, ಬಹುತೇಕ ಕೊಂಬೆಗಳನ್ನು ಕತ್ತರಿಸಿದ್ದರು. ಆದರೆ ಏಕಾಏಕಿ ಕಾಲು ಜಾರಿ ಅವರು ಮರದಿಂದ ಕೆಳಗೆ ಬಿದ್ದಿದ್ದು, ನೆಲಕ್ಕೆ ಬಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz