ಸರ್ಕಾರದ ಬಹು ನಿರೀಕ್ಷಿತ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜೂನ್ 18ರಂದು ಜಿಲ್ಲಾಯ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾÁರೆ ಎಂದು ಜಿಲ್ಲಾಧಿಕಾರಿ ವೈ.ಎಸ್ . ಪಾಟೀಲ ತಿಳಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರನ್ನು ಸೇರಿಸಬೇಕು. ಸ್ಥಳೀಯ ಪಂಚಾಯತಿ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದರೊಂದಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಗೊಂದಲವುಂಟಾಗದಂತೆ ವೇದಿಕೆ ಹಾಗೂ ಮಳಿಗೆಗಳ ಬಳಿ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಿದರು. ಸಭೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್ ವಾಡ್,ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ,ಪಾಲಿಕೆ ಆಯುಕ್ತೆ ರೇಣುಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಬಿ.ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್,ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ತೋಟಗಾರಿಕಾ ಉಪನಿರ್ದೇಶಕ ರಘು, ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣಪ್ಪ, ಕಾರ್ಮಿಕ ಇಲಾಖೆ ಅಕಾರಿ ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್,ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರಿದ್ದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


