ಡಾಮಿನೊಸ್ ದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗೆ ನಾಲ್ವರು ಯುವತಿಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನ ದ್ವಾರಕಪುರಿ ಏರಿಯಾದಲ್ಲಿ ನಡೆದಿದೆ.
ಹಾಡಹಗಲಲ್ಲೇ ನಡುರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವೇಳೆ ಮಹಿಳಾ ಉದ್ಯೋಗಿಗೆ ಕೈ ಮುಗಿದು, ಹೊಡೆಯಬೇಡಿ ಎಂದು ಬೇಡಿದರೂ ಬಿಡದ ಯುವತಿಯರು ಕರುಣೆ ತೋರದೆ ದೊಣ್ಣೆ, ಕೈಗಳಿಂದ ಮನಬಂದಂತೆ ಥಳಿಸಿದ್ದಾರೆ. ಆಕೆ ಕೆಳಗೆ ಬಿದ್ದರೂ ಬಿಡದೇ ಥಳಿಸಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಇಂದೋರ್ ಪೊಲೀಸರು ಆರೋಪಿ ಯುವತಿಯರ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನೂ ಹಲ್ಲೆಗೊಳಗಾದ ಮಹಿಳೆಯಿಂದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz