ದಾಸರಹಳ್ಳಿ ವಲಯದ ಎರಡು ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಎಲ್ಲ ಶಾಲೆಯಲ್ಲೂ ಎಸ್‍ಒಪಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ತಿಳಿಸಿದರು.
ಎರಡು ಶಾಲೆಯ 31 ಮಕ್ಕಳಲ್ಲಿ ಕೊರೊನಾ ಸೋಂಕು ಪ್ರಕರಣ ಕಂಡುಬಂದಿದ್ದು, ಈ ಹಿಂದೆ ಶಾಲೆಯಲ್ಲಿ ಕೈಗೊಳ್ಳುತ್ತಿದ್ದ ಎಲ್ಲ ಕ್ರಮಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ.
ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರದ ಜೊತೆಗೆ ಎಲ್ಲ ಶಾಲಾಕಾಲೇಜುಗಳ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ಯಾನ್ ಸೇರಿದಂತೆ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.
ನಗರದಲ್ಲಿ ಈವರೆಗೆ 41 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. 4,205 ಸ್ಥಳಗಳಲ್ಲಿ ಲಾರ್ವ ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಲಯವಾರು ನೀರಿನ ಸ್ಯಾಂಪಲ್ ಪಡೆಯಲು ತೀರ್ಮಾನ ಮಾಡಲಾಗಿದೆ. ಅನಾರೋಗ್ಯ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಔಷಧಿ ಸಂಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


