ತಿರುಪತಿ: ಸ್ವಂತ ಅಣ್ಣನ ನಿರಂತರ ಅತ್ಯಾಚಾರದಿಂದ ತಂಗಿ ಗರ್ಭಿಣಿಯಾದ ಘಟನೆ ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಅಪ್ರಾಪ್ತ ವಯಸ್ಕರಾಗಗಿದ್ದಾರೆ. ಇಲ್ಲಿನ ಉಪನಗರ ಕಾಲೋನಿಯ ವ್ಯಕ್ತಿಯೊಬ್ಬ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಈತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಆಕೆ ಗಂಡನನ್ನು ತೊರೆದು ಮನೆ ಬಿಟ್ಟು ಹೋಗಿದ್ದಳಂತೆ. ನಂತರ ಈ ವ್ಯಕ್ತಿ ಇನ್ನೊಂದು ಮದುವೆಯಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಆರು ತಿಂಗಳಿಂದ ಮೊದಲ ಹೆಂಡತಿಯ ಮಗ 17ವಯಸ್ಸಿನ ಬಾಲಕ, ತನ್ನ ತಂದೆಯ ಎರಡನೇ ಹೆಂಡತಿ (ಚಿಕ್ಕಮ್ಮ)ನ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಎನ್ನಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 16 ವರ್ಷದ ತನ್ನ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿಯೂ ಆತ ಬೆದರಿಕೆ ಹಾಕಿರುವ ವಿಚಾರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಕೆಲವು ದಿನಗಳ ಹಿಂದೆ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದು, ತಾಯಿ ವಿಚಾರಿಸಿದಾಗ ಅಣ್ಣ ಅತ್ಯಾಚಾರ ನಡೆಸಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ತಾಯಿ ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz