ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಲಷ್ಕರ್- ಎ- ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಗುಂಡಿನ ಚಕಮಕಿಯಲ್ಲಿ ಇತ್ತೀಚೆಗಷ್ಟೇ ಕುಲ್ಗಾಮ್‌ನಲ್ಲಿ ನಡೆದಿದ್ದ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಜಾನ್ ಮೊಹಮ್ಮದ್ ಲೋನ್ ನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಭದ್ರತಾ ಪಡೆಗಳು ಇಂದು ಮುಂಜಾನೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಕಾಶ್ಮೀರಿ ಪಂಡಿತರು, ಹಿಂದೂ ಸಮುದಾಯದ ವಲಸಿಗರು ಹಾಗೂ ಸರ್ಕಾರಿ ಉದ್ಯೋಗಿಗಳನ್ನು ಗುರಿಯಾಗಿಸಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ.
ಹತ್ಯೆಯಾಗಿರುವ ಉಗ್ರ ಶೋಪಿಯಾನ್‌ನ ಜಾನ್ ಮೊಹಮ್ಮದ್ ಲೋನ್ ಭಯೋತ್ಪಾದನಾ ಚಟುವಟಿಕೆಗಳ ಜೊತೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಕಳೆದ ಜೂ.೨ ರಂದು ನಡೆದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ’ ಎಂದು ಕಾಶ್ಮೀರ ಪೊಲೀಸ್ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ.
ಅಮರನಾಥ ಯಾತ್ರೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು ಸೇರಿದಂತೆ ಮೂವರು ಉಗ್ರರನ್ನು ಶ್ರೀನಗರದ ಬೆಮಿನಾದಲ್ಲಿ ನಿನ್ನೆ ಬೆಳಿಗ್ಗೆ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಜೂನ್ ೩೦ರಿಂದ ಅಮರನಾಥ ಯಾತ್ರೆ ಆರಂಭವಾಗಲಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB