ತುಮಕೂರು: ತುಮಕೂರು- ತಿಪಟೂರು- ಅರಸೀಕೆರೆ ಹಾಗೂ ತುಮಕೂರು- ಯಶವಂತಪುರ- ಬಾಣಸವಾಡಿ ನಡುವೆ ಹೊಸದಾಗಿ ಪ್ಯಾಸೆಂಜರ್ ರೈಲು ಸಂಚಾರ ಜೂನ್ 20ರಿಂದ ಆರಂಭವಾಗಲಿದೆ.
ನವದೆಹಲಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ತ್ರಿಪಾಠಿ ಅವರನ್ನು ಸಂಸದ ಜಿ.ಎಸ್.ಬಸವರಾಜು ಭೇಟಿಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ.
ಹೊಸದಾಗಿ ಎರಡು ರೈಲುಗಳ ಸಂಚಾರ ಆರಂಭಿಸುವ ಭರವಸೆಯನ್ನು ರೈಲ್ವೆ ಮಂಡಳಿ ಅಧಿಕಾರಿಗಳು ನೀಡಿದ್ದಾರೆ. ಜೂನ್ 20ರಂದು ನಗರದ ರೈಲು ನಿಲ್ದಾಣದಲ್ಲಿ ನೂತನ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz