ಗುಬ್ಬಿ: ದಲಿತ ಮುಖಂಡ ನರಸಿಂಹಮೂರ್ತಿ ಅವರ ಹತ್ಯೆಯನ್ನು ಖಂಡಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರಿಗೆ ದಲಿತ ಪರ ಸಂಘಟನೆಗಳು ಮುತ್ತಿಗೆ ಹಾಕಿದ ಘಟನೆ ಬುಧವಾರ ಸಂಜೆ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೊರ ಬರುತ್ತಿದ್ದಂತೆಯೇ ಗೃಹ ಸಚಿವರಿಗೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಸಿ.ಕಚೇರಿ ಮುಂಭಾಗವೇ ಸಚಿವರ ಬೆಂಗಾವಲು ವಾಹನವನ್ನು ತಡೆದು ಪ್ರತಿಭಟನೆ ನಡೆಸಿದರು.
ಅರಗಜ್ಞಾನೇಂದ್ರ ದಲಿತ ವಿರೋಧಿ ಗೃಹ ಸಚಿವ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳ ಬಳಿ ಪ್ರತಿಭಟನಾಕಾರರು ನ್ಯಾಯಕ್ಕಾಗಿ ಆಗ್ರಹಿಸಿದರು.
ಪ್ರತಿಭಟನೆ ವೇಳೆ, ಕೆಲ ಕಾಲ ಅರಗಜ್ಞಾನೇಂದ್ರ ಅವರ ಕಾರು ಸ್ಥಳದಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೊನೆಗೆ ಪ್ರತಿಭಟನಾಕಾರರ ತೀವ್ರ ಆಕ್ರೋಶದ ನಡುವೆಯೇ ಜನ ಸಂದಣಿ ದಾಟಿಕೊಂಡು ಸಚಿವರ ಕಾರು ತೆರಳಿತು. ಈ ವೇಳೆ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz