ಇಂಧನ (ಎಟಿಎಫ್) ಬೆಲೆಯಲ್ಲಿನ ತೀವ್ರ ಏರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ದೇಶೀಯ ವಿಮಾನಯಾನ ಸಂಸ್ಥೆಗಳು ತಕ್ಷಣವೇ ವಿಮಾನಯಾನ ದರಗಳನ್ನು ಹೆಚ್ಚಳವಾಗಲಿದೆ.
ದರ ಏರಿಕೆ ಮಾರ್ಗ ಬಿಟ್ಟು ಬೇರೆ ದಾರಿಯಿಲ್ಲ ಎಂದು ಸ್ಪೈಸ್ ಜೆಟ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅಜಯ್ ಸಿಂಗ್ ಹೇಳಿದ್ದಾರೆ.
ಕಾರ್ಯಾಚರಣೆಯ ವೆಚ್ಚವನ್ನು ಉತ್ತಮವಾಗಿ ಉಳಿಸಿಕೊಳ್ಳಲು ವಿಮಾನ ದರಗಳಲ್ಲಿ ಕನಿಷ್ಠ 10-15 ಪ್ರತಿಶತ ಹೆಚ್ಚಳ ಅಗತ್ಯವಿದೆ ಎಂದು ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜೂನ್ 2021 ರಿಂದ ಎಟಿಎಫ್ ಬೆಲೆಗಳು ಶೇಕಡಾ 120 ಕ್ಕಿಂತ ಹೆಚ್ಚಾಗಿದೆ. ಈ ಬೃಹತ್ ಹೆಚ್ಚಳವು ಸಮರ್ಥನೀಯವಲ್ಲ ,ಕೇಂದ್ರ ಮತ್ತು ರಾಜ್ಯಗಳು, ಎಟಿಎಫ್ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡಲು ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ ಎಮದು ಒತ್ತಾಯಿಸಿದ್ದಾರೆ.
ವಿಶ್ವ ಮಟ್ಟಕ್ಕೆ ಹೊಲಿಸಿದರೆ ಭಾರತದಲ್ಲೇ ಅತಿ ಹೆಚ್ಚು ಎಂದು ಅವರು ಹೇಳಿದರು.ಸ್ಪೈಸ್ಜೆಟ್ ಕಳೆದ ಕೆಲವು ತಿಂಗಳುಗಳಲ್ಲಿ ಇಂಧನ ಬೆಲೆ ಏರಿಕೆಯ ಭಾರವನ್ನು ಹೀರಿಕೊಳ್ಳಲು ಪ್ರಯತ್ನಿಸಿದೆ, ಸದ್ಯ ನಮ್ಮ ಕಾರ್ಯಾಚರಣೆಯ ವೆಚ್ಚದ ಶೇಕಡಾ 50 ಕ್ಕಿಂತ ಹೆಚ್ಚು ಹೊರೆಯಾಗುತ್ತಿದೆ ನಾವು ಯುಎಸ್ ಡಾಲರ್ ವಿರುದ್ಧ ಭಾರತೀಯ ರೂಪಾಯಿಯ ದುರ್ಬಲಗೊಳ್ಳುವಿಕೆಯು ವಿಮಾನಯಾನ ಸಂಸ್ಥೆಗಳ ಮೇಲೆ ಮತ್ತಷ್ಟು ಗಮನಾರ್ಹವಾಗಿ ಪರಿಣಾಮ ಬೀರುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz