ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಬಾಳೆಗದ್ದೆ ಬಳಿ ಕೆಎಸ್ಸಾರ್ಟಿಸಿ ಬಸ್ ಮತ್ತು ಓಮ್ನಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಮೋಹನ್-ಶಾರದಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಮೃತಪಟ್ಟವರು ಹಾಗೂ ಬಸ್ ಚಾಲಕನ ಊರು ಮೊದಲಾದ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


