ತಿಪಟೂರು: ದಲಿತ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನರಸಿಂಹ ಮೂರ್ತಿ ಅವರ ಹತ್ಯೆ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿ ವರೆಗೆ ಜಾಥಾ ನಡೆಸಿ, ಉಪ ತಸಿಲ್ದಾರ್ ಆದ ಕೆ.ಎಲ್. ಪರಮೇಶ್ವರ್ ಅವರ ಮುಖಾಂತರ ಗೃಹ ಸಚಿವರಿಗೆ ಹಾಗೂ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡ ಕುಪ್ಪಾಳು ರಂಗಸ್ವಾಮಿ , ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತ ಯುವಕರ ಜೋಡಿ ಕೊಲೆ ನೋವು ಮಾಸುವ ಮುನ್ನವೇ, ಗುಬ್ಬಿ ತಾಲೂಕಿನ ದಲಿತ ಮುಖಂಡನ ಹತ್ಯೆ ಮಾಡಲಾಗಿದೆ. ಸರ್ಕಾರಕ್ಕೆ ದಲಿತರ ಮೇಲೆ ಕಾಳಜಿ ಇಲ್ಲ. ಅವರಿಗೆ ರಕ್ಷಣೆ ನೀಡುವ ಯಾವುದೇ ಕೆಲಸವನ್ನು ಕೂಡ ಮಾಡುತ್ತಿಲ್ಲ ಎಂದರು. ಸರ್ಕಾರ ದಲಿತರ ಮೇಲೆ ಸರ್ಕಾರಕ್ಕೆ ಕಾಳಜಿ ಇದ್ದರೆ, ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಅವರ ಮನೆ ಆಸ್ತಿಪಾಸ್ತಿಗಳನ್ನು ರ ಮುಟ್ಟು ಗೋಲು ಹಾಕಿಕೊಳ್ಳಲಿ ಇಲ್ಲವಾದರೆ, ಮುಂದಿನ ದಿನಗಳಲ್ಲಿ ದಲಿತರು ಉಗ್ರ ಹೋರಾಟ ಮಾಡುವ ಅನಿವಾರ್ಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು
ಡಾ.ಎನ್. ಮೂರ್ತಿ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದ ವೈಫಲ್ಯವೇ ಇದಕ್ಕೆ ಕಾರಣ. ಇನ್ನಾದರೂ ಕೂಡ ಸರ್ಕಾರ ಇವರ ಮೇಲೆ ಕಠಿಣ ಕ್ರಮ ಕೈಗೊಂಡು ಇವರನ್ನು ಗಡಿಪಾರು ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮತಿಘಟ್ಟ ಶಿವಕುಮಾರ್, ತಾಲೂಕು ಉಪಾಧ್ಯಕ್ಷ ಬಾಗುವಾಳ ನಿಂಗರಾಜು, ತಾಲೂಕು ಸಂಚಾಲಕ ಶಾಂತಪ್ಪ, ಶೆಟ್ಟಿಹಳ್ಳಿ ಕಲ್ಲೇಶ್, ಪುಟ್ಟಸ್ವಾಮಿ , ನೊಣವಿನಕೆರೆ ಪ್ರಸನ್ನಕುಮಾರ್ ಸೇರಿದಂತೆ ಪ್ರಮುಖ ದಲಿತ ಮುಖಂಡರುಗಳು ಹಾಜರಿದ್ದರು.
ವರದಿ: ಮಂಜು, ಗುರುಗದಹಳ್ಳಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz