ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಮಾಫಿವೀರೆಂದು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿವಾದಾತ್ಮಕ ಅಗ್ನಿಪಥ್ ಯೋಜನೆ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗ್ನಿಪಥ್ ಸಶಸ್ತ್ರ ಪಡೆಗಳ ನೇಮಕಾತಿ ಯೋಜನೆ ಕುರಿತಂತೆ ಕೇಂದ್ರದ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸತತ 8 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ, ಜೈ ಜವಾನ್ ಜೈ ಕಿಸಾನ್ ಎಂಬ ಮೌಲ್ಯಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡುತ್ತಿದೆ ಎಂದು ಟೀಕಿಸಿದರು.
ಈ ಹಿಂದೆ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದೆ. ಅದೇ ರೀತಿ ದೇಶದ ಯುವಕರ ಬೇಡಿಕೆಗೆ ಒಪ್ಪಿಕೊಳ್ಳುವ ಮೂಲಕ ಮೋದಿ ಮಾಫಿ ವೀರ್ ಆಗಬೇಕು. ತಕ್ಷಣ ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಯಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿದ ನಂತರ ಕಳೆದ ವರ್ಷ ನವೆಂಬರ್‌ನಲ್ಲಿ ಈ ಕಾಯ್ದೆಗಳನ್ನು ರದ್ದುಪಡಿಸಿ ಮೋದಿ ಅವರು ಕ್ಷಮೆಯಾಚಿಸಿದ್ದರು.
ಈಗ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ದೇಶದ ಹಲವೆಡೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಈ ಯೋಜನೆ
ವಾಪಸ್ಸಾತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪಕ್ಕೂ ತಿರುಗಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


