ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಆನೆಕೆರೆ ಗ್ರಾಮದಲ್ಲಿ , ಕರುನಾಡ ವಿಜಯ ಸೇನೆ ಮತ್ತು ಆನೆಕೆರೆ ಗ್ರಾಮ ಪಂಚಾಯ್ತಿ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್ ನೆರವೇರಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಮಕೃಷ್ಣ ಟಿ.ಎಸ್., ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ವಿಜಯ ಸೇನೆ ಸಂಘಟನೆಯ ಸಹಯೋಗದೊಂದಿಗೆ ಈ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕಾಗಿದೆ ಎಂದು ಮನವಿ ಮಾಡಿಕೊಂಡರು.
ಬಳಿಕ ಮಾತನಾಡಿದ ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಅಧ್ಯಕ್ಷ ಎಚ್. ಎಸ್. ಸುರೇಶ್ ಬ್ರಹ್ಮ ಸಂಘಟನೆಯ ವತಿಯಿಂದ ಇನ್ನುಳಿದ ಪಂಚಾಯತಿ ನೆರವಿನೊಂದಿಗೆ ನಮ್ಮ ಸಂಘಟನೆ ಇಂತಹ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ತಾಲೂಕಿನ ಜನತೆಗೆ ಆರೋಗ್ಯ ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದೊರಕಿಸಿಕೊಡುವ ಆಸೆಯ ಹೊಂದಿದ್ದೇವೆ ಆದುದರಿಂದ ಸಂಘಟನೆಯ ಪದಾಧಿಕಾರಿಗಳು ಕೈಜೋಡಿಸಿದರೆ, ಈ ಕಾರ್ಯ ಸುಗಮವಾಗಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಅಶ್ವಿನಿ ನೇತ್ರಾಲಯದ ಸಿ.ಆರ್. ದಾಸೇಗೌಡ ಇವರು ಈ ಶಿಬಿರದ ಮೇಲ್ವಿಚಾರಣೆಯನ್ನು ವಹಿಸಿಕೊಂಡಿದ್ದರು.ಈ ಕಾರ್ಯಕ್ರಮಕ್ಕೆ ,ಕರುನಾಡ ವಿಜಯ ಸೇನೆ ಸಂಘಟನೆಯ ನಂದೀಶ್, ಕೃಷ್ಣಮೂರ್ತಿ ಗವಿರಂಗಪ್ಪ, ಕೃಷ್ಣಮೂರ್ತಿ ಟಿ .ಎಸ್., ನಗರ ಘಟಕದ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತರ ಘಟಕದ ಶಫಿ ಮೊದಲಾದವರು ಭಾಗಿಯಾಗಿದ್ದರು.
ವರದಿ: ಸುರೇಶ್ ಬಾಬು .ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz