ಮಧುಗಿರಿ: ತಾಲ್ಲೂಕು ಆಡಳಿತ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಗರ್ ಹುಕುಂ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಹಶೀಲ್ದಾರ್ ಸುರೇಶ್ ಆಚಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶದಂತೆ ಬಗರ್ ಹುಕುಂ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸುವ ವ್ಯವಸ್ಥೆ ಮಾಡಲಾಗಿದ್ದು, ತಾಲ್ಲೂಕಿನ ಎಲ್ಲಾ ನಾಡ ಕಛೇರಿಗಳಲ್ಲಿ ನಮೂನೆ 57 ರ ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ತಾಲ್ಲೂಕಿನ ನಾಡ ಕಛೇರಿಗಳಲ್ಲಿ ಸಾರ್ವಜನಿಕರು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ವರದಿ: ಆಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz