ಕುಣಿಗಲ್: ಉಪನೋಂದಣಾಧಿಕಾರಿ ಕಚೇರಿ ಕಿಟಕಿಯ ಸರಳು ಮುರಿದು, ಕಳ್ಳತನಕ್ಕೆ ಯತ್ನಿಸಿದ ಘಟನೆ ಬುಧವಾರ ತಡ ರಾತ್ರಿ ಕುಣಿಗಲ್ ನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಕಚೇರಿ ಒಳಗೆ ನುಗ್ಗಿದ ಕಳ್ಳರು ಬಿರು ಒಡೆದು ಕಳ್ಳತನಕ್ಕೆ ಯತ್ನಿಸಿದ್ದು, ನಗದು ಸಿಗದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ಸಾಗಿದ್ದಾರೆ.
ಗುರುವಾರ ಬೆಳಗ್ಗೆ ಕಚೇರಿಗೆ ಉಪನೋಂದಣಾಧಿಕಾರಿ ಯಶೋಧ ಆಗಮಿಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ, ಪ್ರಕರಣ ದಾಖಲಿಸಲಾಗಿದೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz