ತುಮಕೂರು: ವ್ಯಕ್ತಿಯೊಬ್ಬರ ಮೇಲೆ ಮಚ್ಚಿನಿಂದ ಕೊಚ್ಚಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಭೀಮಸಂದ್ರದಲ್ಲಿ ನಡೆದಿದ್ದು, ಘಟನೆಗೆ ಹಳೆಯ ವೈಷಮ್ಯ ಕಾರಣ ಎನ್ನಲಾಗಿದೆ.
ಭೀಮಸಂದ್ರ ದ ಜನನಿಬಿಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಂಗರಾಜು ಎಂಬವರ ಮೇಲೆ ಕಿರಣ್ ಎಂಬಾತ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿಯು ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz