ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಕರುನಾಡ ವಿಜಯಸೇನೆ ಸಂಘಟನೆ ಮತ್ತು ಆನೆಕೆರೆ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಜೂನ್ 22ರಂದು ಆನೆಕೆರೆ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ 20 ಜನ ರೋಗಿಗಳನ್ನು ಹೆಚ್ಚಿನ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಸಪ್ತಗಿರಿ ವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡು ವಿಜಯ ಸೇನೆ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಹೆಚ್.ಎಸ್.ಸುರೇಶ್, ಹೆಚ್ಚಿನ ಚಿಕಿತ್ಸೆಗಾಗಿ ತೆರಳುತ್ತಿರುವ ತಮಗೆಲ್ಲರಿಗೂ ಶುಭವಾಗಲಿ ಚಿಕಿತ್ಸೆಗೆ ಸಹಕರಿಸಿ, ಬೇಗನೆ ಗುಣಮುಖರಾಗಿ ಬನ್ನಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆಯ ತಾಲೂಕು ಕಾರ್ಯಾಧ್ಯಕ್ಷ ನಂದೀಶ್ , ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ , ತಾಲೂಕು ಕಾರ್ಯದರ್ಶಿ ಗವಿರಂಗಪ್ಪ, ತಾಲೂಕು ಉಪಾಧ್ಯಕ್ಷ ನೂರುಲ್ಲಾ, ತಾಲೂಕು ಅಲ್ಪಸಂಖ್ಯಾತ ಘಟಕದ ಗೌರವಾಧ್ಯಕ್ಷ ರಫೀಕ್ , ಮಹಿಳಾ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿನುತಾ, ವೆಂಕಟೇಶ್, ಮಂಜುನಾಥ್ , ಪಾರ್ಥ ಸಾರಥಿ ಮುಂತಾದ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz