ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಓರ್ವ ಮೃತಪಟ್ಟು ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ ಘಟನೆ ಮುಂಬೈಯ ಕುರ್ಲ ಪ್ರದೇಶದಲ್ಲಿ ನಡೆದಿದೆ.
ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ, ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ. ಗಾಯಾಳುಗಳನ್ನು ಘಾಟ್ಕೋಪರ್ ಮತ್ತು ಸಿಯಾನ್ನಲ್ಲಿರುವ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅವಶೇಷಗಳ ಅಡಿಯಲ್ಲಿ ಇನ್ನೂ 20ರಿಂದ 22 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz