ಮೈಸೂರು: ಇಬ್ಬರು ಮಕ್ಕಳ ಜೊತೆಗೆ ನೇಣು ಹಾಕಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.
ತಾಯಿ ಸರೋಜ (32) ತನ್ನ ಇಬ್ಬರು ಮಕ್ಕಳಾದ ಗೀತಾ (6) ಹಾಗೂ ಕುಸುಮಾ (4) ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ನಡೆದಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


