nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಡಿ.ಪಿ. ಸಭೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಡಾ.ಜಿ.ಪರಮೇಶ್ವರ್!
    ಕೊರಟಗೆರೆ June 29, 2022

    ಕೆ.ಡಿ.ಪಿ. ಸಭೆಯಲ್ಲಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಡಾ.ಜಿ.ಪರಮೇಶ್ವರ್!

    By adminJune 29, 2022No Comments2 Mins Read
    g parameshwar

    ಕೊರಟಗೆರೆ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಜಿ ಪರಮೇಶ್ವರ್ ರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯು ನಡೆಯಿತು.

    ತಾಲ್ಲೂಕು ದಂಡಾಧಿಕಾರಿ ನಹೀದಾ ಜಮ್ ಜಮ್, ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಜಿ ದೀಪಶ್ರೀ, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿ ಪಿ ಐ ಸಿದ್ದರಾಮೇಶ್ವರ್ ಮತ್ತು ಎಲ್ಲ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಶಾಸಕರ ಡಾ.ಜಿ.ಪರಮೇಶ್ವರ್ ಆದೇಶ ನೀಡಿದರು.


    Provided by
    Provided by

    ಮೊದಲಿಗೆ ಕೃಷಿ ಇಲಾಖೆಯ ಎಡಿಎ ನಾಗರಾಜು ತಮ್ಮ ಇಲಾಖೆಯಲ್ಲಿ ಬರುವಂತಹ ಅನುದಾನಗಳನ್ನು ಮತ್ತು ಪೂರ್ಣಗೊಂಡಿರುವ ಅಭಿವೃದ್ಧಿ ಸಭೆಯಲ್ಲಿ ತಿಳಿಸಿದರು. ಕೃಷಿ ಹೊಂಡಗಳನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಆದೇಶದ ಮೇರೆಗೆ ಸದ್ಯಕ್ಕೆ ಬಂದ್ ಮಾಡಲಾಗಿದೆ, ಕೃಷಿ ಹೊಂಡಗಳ ಅಭಿವೃದ್ಧಿಗೆ ಕಾರ್ಯ ಆಗುತ್ತಿಲ್ಲವೆಂದು ಅಸಮಾಧಾನವನ್ನು ವ್ಯಕ್ತಪಡಿಸಿದಾಗ, ಪರಮೇಶ್ವರ್ ಅವರು ಪ್ರತಿಕ್ರಿಯಿಸಿ ಕೂಡಲೇ ನನಗೆ ಪತ್ರವನ್ನು ಬರೆಯಿರಿ, ನಾನು ಸರ್ಕಾರದ ಗಮನಕ್ಕೆ ತಂದು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಹೊಂಡ ನಾಲ ಬದು ಚೆಕ್ ಡ್ಯಾಮ್ ಇಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಿ ರೈತರನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು.

    ಪಶು ಇಲಾಖೆಗೆ ಸಂಬಂಧಪಟ್ಟಂತೆ ಸಿದ್ಧನಗೌಡ ಸಭೆಯನ್ನುದ್ದೇಶಿಸಿ ಮಾತನಾಡಿ, ತಮ್ಮ ಇಲಾಖೆಯ ಬಗ್ಗೆ ಪೂರ್ಣವಾದ ಮಾಹಿತಿಯನ್ನು ತಿಳಿಸಿದರು. ಈ ವೇಳೆ ಹಳ್ಳಿಕಾರ್ ತಳಿಯ ಶ್ರಮಿಸಬೇಕೆಂದು ಶಾಸಕರು ಆದೇಶಿಸಿದರು.

    ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಯೋಜನೆಯ ವಾರ್ಷಿಕ ಅನುದಾನ ಬಳಕೆಯಲ್ಲಿ ತೋಟಗಾರಿಕೆ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿದ ಮಾನವ ದಿನಗಳನ್ನು ಸಂಪೂರ್ಣಗೊಳಿಸದೆ, ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ನರೇಗಾ ಯೋಜನೆಯ 1 ಕೋಟಿ 80 ಲಕ್ಷ ರೂಗಳನ್ನು ಅಭಿವೃದ್ಧಿ ಕೆಲಸಕ್ಕೆ ಬಳಸದೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಮೇಲೆ ಪರಮೇಶ್ವರ್ ಅವರು ಶಿಸ್ತುಕ್ರಮಕ್ಕೆ ಮುಂದಾದರು. ಮ

    ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿ ಕಚೇರಿಯಲ್ಲಿ ಇದ್ದುಕೊಂಡು ತಮ್ಮ ಕಚೇರಿಯ ಎಸ್ ಡಿ ಎ ರನ್ನು ಸಭೆಗೆ ತಮ್ಮ ಇಲಾಖೆಯ ಯಾವುದೇ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಸ್ಪಷ್ಟವಾಗಿ ನೀಡದ ಕಾರಣ ಇವರ ಕಾರ್ಯ ವೈಖರಿಯನ್ನು ಕಂಡು ಶಾಸಕರು ಬೇಸರ ವ್ಯಕ್ತಪಡಿಸಿದರು.

    ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಬಿಇಓ ಸುಧಾಕರ್ ಸಭೆಯನ್ನುದ್ದೇಶಿಸಿ ಮಾತನಾಡಿ,  ತಾಲೂಕಿನ ಅತ್ಯಂತ 104 ಶಾಲೆಗೆ ಸುಸಜ್ಜಿತವಾದ ಕಟ್ಟಡವಿಲ್ಲ, 56 ಶಾಲೆಗಳ ಪೈಕಿ 97 ಕೊಠಡಿಗಳು ರಿಪೇರಿಯಲ್ಲಿವೆ, 94 ಶಾಲೆಗಳ ಕಟ್ಟಡಗಳು ಮಾತ್ರ ಸುಸಜ್ಜಿತವಾಗಿವೆ ಎಂದು ಶಾಸಕರ ಗಮನಕ್ಕೆ ತಂದರು.

    ಇದಕ್ಕೆ ಉತ್ತರಿಸಿದ ಶಾಸಕರು,  ತಕ್ಷಣವೇ ಸರ್ಕಾರದ ಗಮನಕ್ಕೆ ತಂದು ಶಾಲೆಗಳ ಅಭಿವೃದ್ಧಿಗೆ ಹೊತ್ತು ನೀಡುತ್ತೇನೆಂದು ತಿಳಿಸಿದಲ್ಲದೇ, ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರುವಂತಹ ಸಮವಸ್ತ್ರ ಬಾರದಿರುವ ಕಾರಣ ಸಭೆಯಲ್ಲಿ ಸರ್ಕಾರದ ವಿರುದ್ಧ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.

    ಒಟ್ಟಾರೆ ಕೊರಟಗೆರೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದ ಮೀನುಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್, ಆರೋಗ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಅಕ್ಷರ ದಾಸೋಹ, ಆಹಾರ ಇಲಾಖೆ, ಶಿಕ್ಷಣ ಇಲಾಖೆಗೂ ಸೇರಿದಂತೆ ಇನ್ನು ಹಲವು ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷವನ್ನು ಕಂಡು ಖಡಕ್ ವಾರ್ನಿಂಗ್ ಕೊಡುವುದರ ಮೂಲಕ  ಶಿಸ್ತು ಕ್ರಮಕ್ಕೆ ಶಾಸಕರು ಮುಂದಾಗಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.