ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಕಾರ್ಯಕರ್ತ ಕನ್ನಯ್ಯ ಲಾಲ್ ನನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ಮಂದಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ರಾಜಸ್ಥಾನದ ಉದಯಪುರ್ ನಲ್ಲಿ ಅಮಾನುಷವಾಗಿ ಕನ್ನಯ್ಯ ಲಾಲ್ ನನ್ನು ಹತ್ಯೆ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಅವರ ಪ್ರತಿಕೃತಿಗಳನ್ನು ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಭಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ನೂಪುರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಒಂದನ್ನು ರಾಜಸ್ಥಾನದ ದರ್ಜಿಗ ಕನ್ನಯ್ಯ ಲಾಲ್ ತನ್ನ ಸ್ಟೇಟಸ್ ನಲ್ಲಿ ಹಾಕಿದ್ದೇ ದೊಡ್ಡ ಅಪರಾಧವೆಂದು ಭಾವಿಸಿದ ದುಷ್ಕರ್ಮಿಗಳು ಅವರ ಕುತ್ತಿಗೆಯನ್ನು ಸೀಳಿ ಹತ್ಯೆಗೈದು ವಿಕೃತಿ ಮೆರೆದಿದ್ದಾರೆ. ಜೊತೆಗೆ ತಾವೇ ಕೊಲೆ ಮಾಡಿರುವ ವಿಡಿಯೋ ಸಹ ಬಿಡುಗಡೆ ಮಾಡಿ ಪ್ರಧಾನಮಂತ್ರಿಯವರನ್ನು ಹತ್ಯೆ ಮಾಡುತ್ತೇವೆಂಬ ಹೇಳಿಕೆ ನೀಡಿರುವುದು ದೇಶದ ಸಾಮರಸ್ಯ ಕದಡುವ ಕುಕೃತ್ಯವಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಅವರ ವಿರುದ್ಧ ತಕ್ಷಣ ವಿಚಾರಣೆ ನಡೆಸಿ ಅವರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು. ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಮೆರವಣಿಗೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತುಮಕೂರು ನಗರದ ವಿವಿಧ ಹಿಂದು ಪರ ಸಂಘಟನೆಗಳ ಮುಖಂಡರುಗಳು ಉಪಸ್ಥಿತರಿದ್ದರು
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB