ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ.
ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳ ದೃಶ್ಯವೈಭವ ನೋಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
‘ಮಾಳಿಗೆಗಳು ಸೋರುತ್ತಿವೆ. ಗೋಡೆಗಳು ಬಣ್ಣಗೆಟ್ಟಿವೆ. ಕಿಟಕಿ, ಬಾಗಿಲು ಹಾಳಾಗಿವೆ. ಕುಡಿಯಲು ನೀರಿಲ್ಲ. ಮಕ್ಕಳಿಗೆ ಶೌಚಾಲಯವೂ ಇಲ್ಲ. ಮಕ್ಕಳ ಜೀವಕ್ಕೆ ಗ್ಯಾರಂಟಿ ಇಲ್ಲ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಬಣ್ಣಗೇಡು ವರಸೆಗೆ ಇದು ತಾಜಾ ಉದಾಹರಣೆ. ಹೇಳುವುದು ಒಂದು, ಮಾಡುವುದು ಇನ್ನೊಂದು. ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಅರಾಜಕತೆ ಮಕ್ಕಳ ಕಲಿಕೆಯಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದೆ. ಪಠ್ಯಕ್ಕೆ ಕೇಸರಿ ಬಳಿದು ಕತ್ತರಿ ಹಾಕುವ ಅಕ್ಷರದ್ರೋಹಿ ಬಿಜೆಪಿ ಸರಕಾರಕ್ಕೆ ಬಣ್ಣಗೆಟ್ಟ ಶಾಲೆಗಳ ಗೋಡೆಗಳೇ ಕಾಣುತ್ತಿಲ್ಲ ಎಂದು ಟೀಕಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


