ಸಿಂಧನೂರು: ತಾಲೂಕಿನ ಸಿಂಗಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ಮಹಿಳೆಯೊಂದಿಗೆ ನಡೆಸಿರುವ ರಾಸಲೀಲೆಯ ವಿಡಿಯೋ ಎನ್ನಲಾಗಿರುವ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕ ತಲೆಮರೆಸಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಮಹ್ಮದ್ ಹಜರುದ್ದೀನ್ ಎನ್ನುವ ಶಿಕ್ಷಕ ಮಹಿಳೆಯೊಂದಿಗೆ ರಾಸಲೀಲೆ ನಡೆಸಿ, ತಾನೇ ವಿಡಿಯೋ ಮಾಡಿಕೊಂಡಿದ್ದಾನೆ. ಎರಡು ದಿನದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದಂತೆ ಶಿಕ್ಷಕ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಸಿಂಗಾಪುರದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಮನೆ ಮಾಡಿಕೊಂಡಿದ್ದ. ಅಲ್ಲಿಯೇ ಟ್ಯೂಷನ್ ಕೂಡ ನಡೆಸುತ್ತಿದ್ದ. ಗೃಹಿಣಿಯೊಬ್ಬರನ್ನು ಕಾರಟಗಿಯ ತನ್ನ ನಿವಾಸಕ್ಕೆ ಕರೆಯಿಸಿಕೊಂಡು ರಾಸಲೀಲೆ ನಡೆಸಿದ್ದ ಎನ್ನಲಾಗುತ್ತಿದೆ.
ಘಟನೆಯ ಬಳಿಕ ಬಿಇಒ ಹಾಗೂ ಡಿಡಿಪಿಐ ಅವರಿಗೂ ದೂರು ಸಲ್ಲಿಕೆಯಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


