ತುಮಕೂರು: ಜನಪ್ರತಿನಿಧಿಯಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಗ್ರಾಮ ಪಂಚಾಯತ್ ಸದಸ್ಯನೋರ್ವ, ಮಹಿಳಾ ಪಿಡಿಒ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಗ್ರಾ.ಪಂ. ಸದಸ್ಯನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆಸಿ ಪುರ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಪಿಡಿಓ ಕೈಗೆ ಮುತ್ತಿಡುವುದು, ಕೈ ಹಿಡಿದೆಳೆಯುವುದು, ಅವರು ಕುಳಿತುಕೊಳ್ಳುತ್ತಿದ್ದ ಸ್ಥಳಕ್ಕೆ ಬಂದು ಕಿರುಕುಳ ನೀಡುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪಿಡಿಒ ಕೆಲಸ ನಿರ್ವಹಿಸುತ್ತಿರುವ ಸ್ಥಳದ ಮುಂಭಾಗ ಸಾರ್ವಜನಿಕರು ಕುಳಿತುಕೊಳ್ಳಲು ಇಡಲಾಗಿರುವ ಕುರ್ಚಿಯಲ್ಲಿ ಕುಳಿತುಕೊಂಡಿರುವ ಗ್ರಾ.ಪಂ.ಸದಸ್ಯ ಪಿಡಿಒ ಕೆಲಸ ನಿರ್ವಹಿಸಲು ಸಾಧ್ಯವಾಗದಂತೆ ಕಿರುಕುಳ ನೀಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಪಿಡಿಒ ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದರೆ, ಗ್ರಾ.ಪಂ.ಸದಸ್ಯ ಪಿಡಿಒ ಜೊತೆಗೆ ದುರ್ವರ್ತನೆ ತೋರುತ್ತಿರುವುದು ಕಂಡು ಬಂದಿದೆ. ಕೈ ಹಿಡಿದೆಳೆದು ಕಿರುಕುಳ ನೀಡುತ್ತಿರುವುದು ಕಂಡು ಬಂದಿದೆ.
ಗ್ರಾ.ಪಂ. ಸದಸ್ಯನ ದುರ್ವರ್ತನೆಯ ಮುಂದೆ ಪಿಡಿಓ ಅಸಹಾಯಕಳಾಗಿರುವುದು ಕಂಡು ಬಂದಿದ್ದು, ಕರ್ತವ್ಯ ನಿರತ ಪಿಡಿಓ ಮೇಲೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯಗಳು ನಡೆದರೆ, ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು? ಎಂದು ಪ್ರಶ್ನಿಸುವಂತಾಗಿದೆ.
ಗ್ರಾಮ ಪಂಚಾಯತ್ ಸದಸ್ಯನ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು. ಈ ಮೂಲಕ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz