ಕೊಪ್ಪಳ: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನ ರಾಸಲೀಲೆ ಪ್ರಕರಣ ಬಯಲಾಗುತ್ತಿದ್ದಂತೆಯೇ ಆತನನ್ನು ಸಸ್ಪೆಂಡ್ ಮಾಡಲಾಗಿದ್ದು, ಆತನ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಶಿಕ್ಷಕ ಮಹಮ್ಮದ್ ಅಜರುದ್ದೀನ್ ನನ್ನು ಅಮಾನತು ಮಾಡಲಾಗಿದೆ.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿಕ್ಷಕ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಇದೀಗ ಸಂತ್ರಸ್ತ ಮಹಿಳೆಯೊಬ್ಬರು ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ.
ಪುತ್ರಿಗೆ ಟ್ಯೂಷನ್ ಹೇಳಿ ಕೊಡುವ ಜೊತೆಗೆ ಸರ್ಕಾರಿ ಸೌಲಭ್ಯ ಕಲ್ಪಿಸುವುದಾಗಿ ನಂಬಿಸಿ ಮನೆಗೆ ಕರೆಸಿಕೊಂಡು ಲೈಂಗಿಕ ಕ್ರಿಯೆಗೆ ಪದೇ ಪದೇ ಒತ್ತಾಯಿಸಿದ್ದಾನೆ. ಇಲ್ಲದಿದ್ದರೆ ವಿಡಿಯೋಗಳನ್ನು ಬಹಿರಂಗಪಡಿಸಿ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


