ಬೆಂಗಳೂರು: ಪಿಎಸ್ ಐ ನೇಮಕಾತಿ ಹಗರಣಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಅವರೂ ಕಾರಣ, ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಸಿಎಂ ಬಸವರಾಜ ಬೊಮ್ಮಾಯಿ ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


