ಹಿರಿಯೂರು: ರಾಜ್ಯ ಪೌರ ನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯನ್ನು ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸುವ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ವಾಪಸ್ ಪಡೆದುಕೊಳ್ಳಲಾಯಿತು.
ಹಿರಿಯೂರು ನಗರದ ನಗರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರನೌಕರರ ಸಂಘ, ಹಿರಿಯೂರು ಸಮಿತಿ ಹಾಗೂ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಿರಿಯೂರು ಶಾಖೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹೊರಗುತ್ತಿಗೆ ನೌಕರರು ಹಿಂಪಡೆಯುವಂತೆ ಹಿರಿಯೂರು ನಗರಸಭೆ ಪೌರಾಯುಕ್ತರಾದ ಡಿ.ಉಮೇಶ್ ಅವರು ಮನವಿ ಮಾಡಿದ್ದರು.
ನಗರಸಭಾ, ಪಟ್ಟಣ ಪಂಚಾಯತಿ, ಪುರಸಭೆ ಹಾಗೂ ಎಲ್ಲಾ ಹೊರಗುತ್ತಿಗೆ ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಮುಷ್ಕರನಿರತ ಪೌರಕಾರ್ಮಿಕರು ತಮ್ಮ ಮುಷ್ಕರವನ್ನು ಸ್ಥಗಿತಗೊಳಿಸಿ, ಕೆಲಸಕ್ಕೆ ಹಾಜರಾಗುವ ಜೊತೆಗೆ ಕಳೆದ ನಾಲ್ಕು ದಿನಗಳಿಂದ ಬಾಕಿ ಇರುವ ನಗರದ ಸ್ವಚ್ಛತೆಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಮನವಿ ಮಾಡಿದರು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ತಾಲ್ಲೂಕು ಸಮಿತಿಯು ಸಹ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಹೋರಾಟದಲ್ಲಿ ಪಾಲ್ಗೊಂಡಿತ್ತು. ಇದೇ ಸಂದರ್ಭದಲ್ಲಿ ಹಿರಿಯೂರು ನಗರಸಭಾ ಕಾರ್ಯಾಲಯದಿಂದ ಹೊರಟ ಮೆರವಣಿಗೆ ಸರ್ಕಾರಿ ಆಸ್ಪತ್ರೆಯ ಆವರಣದ ಹೊರಭಾಗದ ಪ್ರಧಾನ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪ್ರತಿಭೆಗೆ ಹಾರ ಹಾಕಿ ಗೌರವ ಸಲ್ಲಿಸುವುದರ ಮೂಲಕ ಹೊರಗುತ್ತಿಗೆ ಪೌರಕಾರ್ಮಿಕರು ಮುಷ್ಕರವನ್ನು ಹಿಂಪಡೆದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಬೇಂದ್ರ ಬಾಬು, ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಉಪಾಧ್ಯಕ್ಷರುಗಳಾದ ವಿಜಯ್, ಕುಮಾರ್ ಶ್ರೀನಿವಾಸ್ ಆರ್., ಹಿರಿಯೂರು ತಾಲ್ಲೂಕು ಪೌರನೌಕರರ ಸಂಘದ ಅಧ್ಯಕ್ಷರಾದ ಬಿ.ದುರ್ಗೇಶ್, ತಾಲ್ಲೂಕು ಹೊರಗುತ್ತಿಗೆ ವಾಹನ ಚಾಲಕರ ಸಂಘದ ಅಧ್ಯಕ್ಷರಾದ ದಿವಾಕರ್, ಉಪಾಧ್ಯಕ್ಷರಾದ ಆರ್.ಎಲ್.ರಾಜಶೇಖರ್, ಕಂಪ್ಯೂಟರ್ ಆಪರೇಟರ್ ನೇತ್ರಾವತಿ, ಕಿರಣ್ ಕುಮಾರ್ ಹಾಗೂ ನಗರಸಭೆ ಕಾರ್ಯಾಲಯದ ಎಲ್ಲಾ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


