ತುಮಕೂರು: ರಸ್ತೆ ದಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ದೇಹ ಛಿದ್ರಛಿದ್ರಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಡಿಕ್ಕಿ ಹೊಡೆದ ವಾಹನ ಸ್ಥಳದಿಂದ ಪರಾರಿಯಾಗಿದ್ದು, ಡಿಕ್ಕಿ ಹೊಡೆದ ವಾಹನ ಹಾಗೂ ವ್ಯಕ್ತಿಯ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ಇಲ್ಲಿನ ಊರುಕೆರೆ ಬಳಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಬೆಳಗ್ಗಿನ ಜಾವ ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿಯ ಮುಖ ಹಾಗೂ ದೇಹ ಜಜ್ಜಿ ಹೋಗಿದ್ದು, ಭೀಕರವಾಗಿ ಕಂಡು ಬಂದಿದೆ.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy