nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುಡಿಮೆಯ ಸಂಪತ್ತು ಹಾಳಾಗಬಾರದು: ಸ್ವ-ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶದಲ್ಲಿ ಡಾ.ಡಿ.ವೀರೇಂದ್ರ ಹೆಗಡೆ
    ಮಧುಗಿರಿ July 7, 2022

    ದುಡಿಮೆಯ ಸಂಪತ್ತು ಹಾಳಾಗಬಾರದು: ಸ್ವ-ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶದಲ್ಲಿ ಡಾ.ಡಿ.ವೀರೇಂದ್ರ ಹೆಗಡೆ

    By adminJuly 7, 2022No Comments3 Mins Read
    veerendra hegade

    ಮಧುಗಿರಿ: ಕಳೆದ 33 ವರ್ಷಗಳ  ನಂತರ ಮಧುಗಿರಿಗೆ ಸ್ವ-ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶಕ್ಕೆ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗಡೆಯವರು ಆಗಮಿಸಿ,  ಶ್ರೀ ದಂಡಿನ ಮಾರಮ್ಮ  ತಾಯಿಯ ದರ್ಶನ ಪಡೆದರು. ನಂತರ ಭವ್ಯ ಮೆರವಣಿಗೆಯೊಂದಿಗೆ ವಿವಿಧ ಜಾನಪದ ಕಲಾ ತಂಡಗಳಾದ ವೀರಗಾಸೆ, ಡೊಳ್ಳು ಕುಣಿತ, ಹುಲಿ ವೇಷ ಕುಣಿತ, ಮತ್ತು ವಿವಿಧ ವಾದ್ಯಗಳು ಮತ್ತು ಸಾವಿರಾರು ಹೆಣ್ಣುಮಕ್ಕಳು ಕಳಸ ಹೊತ್ತು ವೀರೇಂದ್ರ ಹೆಗ್ಗಡೆಯವರನ್ನು ಪಟ್ಟಣದ ಪ್ರಮುಖ  ಬೀದಿಗಳಲ್ಲಿ ಮೆರವಣಿಗೆ ಮಾಡಿ, ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿನ ವೇದಿಕೆಗೆ ಬರಮಾಡಿಕೊಂಡರು.

    ನಂತರ ಸ್ವ ಉದ್ಯೋಗ ಮೇಳ ಮತ್ತು ಸಾಧನ ಸಮಾವೇಶವನ್ನು ಡಾ.ಹೆಗ್ಗಡೆ  ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ,   ಶಾಸಕ ಎಂ.ವಿ ವೀರಭದ್ರಯ್ಯ, ಜಿ ಪರಮೇಶ್ವರ್ ಹಾಗೂ ವಿಧಾನಪರಿಷತ್ ಸದಸ್ಯರಾದ  ರಾಜೇಂದ್ರ, ಚಿದಾನಂದಗೌಡ ಮತ್ತು ಪುರಸಭೆ ಅಧ್ಯಕ್ಷ ತಿಮ್ಮರಾಜು ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಇದೇ ವೇಳೆ ವೀರೇಂದ್ರ ಹೆಗ್ಗಡೆಯವರು ಗಣ್ಯರು, ವಿವಿಧ ಫಲಾನುಭವಿಗಳಿಗೆ ಆಟೋರಿಕ್ಷಾ, ನಾಲ್ಕು ಚಕ್ರದ ವಾಹನಗಳು,  ನಮ್ಮ ಊರು ನಮ್ಮ ಕೆರೆ ಲೋಕಾರ್ಪಣೆ ಮಾಡಿದರಲ್ಲದೇ, ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣೆ, ಜನಮಂಗಳ ಸಲಕರಣೆ ವಿತರಣೆ,  ಆರೋಗ್ಯ ರಕ್ಷಾ ಸೌಲಭ್ಯ ವಿತರಣೆ,  ಮಾಸಾಶನ ವಿತರಣೆ ಮಾಡಿದರು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಾ. ಡಿ. ವೀರೇಂದ್ರ ಹೆಗ್ಗಡೆ, ತಾಲೂಕಿನ  ಸಂಘದ ಸದಸ್ಯರು  ಅಕ್ಷರ ಜ್ಞಾನವಿಲ್ಲದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವ್ಯವಹಾರ ಜ್ಞಾನ ಕಲಿಸುತ್ತಿದ್ದು, ಈ ಮೂಲಕ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡಿದೆ ಎಂದರು.

    ದೈನಂದಿನ ಜೀವನದಲ್ಲಿ ಯಾರು ತಮ್ಮ ಕರ್ತವ್ಯದಲ್ಲಿ ತೊಡಗಿಕೊಂಡು ದೇವರನ್ನು ಸ್ಮರಿಸುತ್ತಾರೋ ಅಂತವರಿಗೆ ಭಗವಂತನ ಆಶೀರ್ವಾದ ಸದಾ ದೊರೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮಾಂತರ ಪ್ರದೇಶದ ದುರ್ಬಲರ ಏಳಿಗೆಗೆ ದುಡಿಮೆಯ ಪ್ರಯೋಜನದ ಜೊತೆಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸದೃಢರಾನ್ನಾಗಿ ಮಾಡುವ ಉದ್ದೇಶ ಹೊಂದಿದೆ ಎಂದರು.

    ದುಡಿಮೆಯ ಸಂಪತ್ತು ಹಾಳಾಗಬಾರದು ಎಂಬ ಸದುದ್ದೇಶದಿಂದ ಉಳಿತಾಯದ ಬಗ್ಗೆ ಜನಜಾಗೃತಿ ಮಾಡಲಾಗುತ್ತಿದ್ದು, ಸಂಸಾರದಲ್ಲಿ ಎಲ್ಲರೂ ದುಡಿಮೆ ಮಾಡಿದಾಗ ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರದ್ದೂ ಎಂಬುದೇ ಸಂಸ್ಥೆಯ ಉದ್ದೇಶ. ಸ್ವ-ಸಹಾಯ ಸಂಘ ಎಂದರೆ ನಮಗೆ ನಾವೇ ಸಹಾಯ ಮಾಡಿಕೊಳ್ಳುವುದು ಎಂದರ್ಥ  ಎಂದ ಅವರು, ಸರ್ಕಾರದ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ದೊರೆಯಬೇಕೆಂಬ ಉದ್ದೇಶದಿಂದ 326 ಸೇವಾ ಕೇಂದ್ರಗಳನ್ನು ತೆರೆದು ಸರ್ಕಾರದ ಎಲ್ಲ ಮಾಹಿತಿ ನೀಡುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

    ಜಿಲ್ಲೆಯಲ್ಲಿ 30,000ಕ್ಕೂ ಅಧಿಕ ಕ್ರಿಯಾಶೀಲ ಸಂಘಗಳಿದ್ದು, 267 ಕೋಟಿ ಹಣ ಉಳಿತಾಯ ಮಾಡಲಾಗಿದೆ. 1,400 ಕೋಟಿ ವ್ಯವಹಾರ ಮಾಡಲಾಗಿದ್ದು, ಇದರ ಉದ್ದೇಶ ಮಹಿಳೆಯರು ಸಬಲೀಕರಣವಾಗಬೇಕು ಎಂಬುದೇ ಆಗಿದೆ ಎಂದರು.

    ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಅರಗಜ್ಞಾನೇಂದ್ರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ 400 ಕ್ಕೂ ಅಧಿಕ ಕೆರೆಗಳ ಅಭಿವೃದ್ಧಿಪಡಿಸಿದ್ದು, ಆರ್ಥಿಕ ಶಿಸ್ತು, ಸದೃಢ ಸಮಾಜ ನಿರ್ಮಾಣಕ್ಕೆ ಪಣತೊಟ್ಟು, ಮೌನಕ್ರಾಂತಿ ಮೂಲಕ ಸಮಾಜವನ್ನು ಕಟ್ಟುತ್ತಿರುವುದು ಸಂತಸದ ವಿಚಾರ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನೇಕ ಯೋಜನೆಗಳ ಜೊತೆ ಧರ್ಮಸ್ಥಳ ಸಂಸ್ಥೆಯೂ ಕೈ ಜೋಡಿಸಿದರೆ ಉಪಯುಕ್ತವಾಗುತ್ತದೆ. ಬರಪೀಡಿತ ಪ್ರದೇಶವಾದ ಈ ಭಾಗದಲ್ಲಿ ಶೇಕಡ 100ರಷ್ಟು ಸಾಲ ವಸೂಲಾತಿ ಆಗುತ್ತಿರುವುದು ಕ್ರಾಂತಿಕಾರಿ ಬೆಳವಣಿಗೆಯಾಗಿದೆ ಎಂದರು.

    ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, 1982 ರಲ್ಲಿ ಧರ್ಮಸ್ಥಳದಲ್ಲಿ ಕೇವಲ ಎರಡು ಹಳ್ಳಿಗಳಿಂದ ಪ್ರಾರಂಭವಾದ ಸಣ್ಣ ಪ್ರಯತ್ನ ಇಂದು ಆಂದೋಲನ ರೂಪ ತಾಳಿದೆ. ರಾಜ್ಯದಲ್ಲಿ 6.50 ಕೋಟಿ ಜನಸಂಖ್ಯೆ ಇದ್ದು ಪೂಜ್ಯ ಹೆಗ್ಗಡೆಯವರು ಗ್ರಾಮಾಭಿವೃದ್ದಿ ಮೂಲಕ 2.5 ಕೋಟಿ ಜನರ ಮನಸ್ಸು ಗೆದ್ದಿದ್ದಾರೆ. ಪೂಜ್ಯರ ಸೇವೆ ಗುರುತಿಸಿ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಆಗ್ರಹಿಸಿದರು.

    ಅತಿ ಹೆಚ್ಚು ಬಡತನವಿರುವ ಈ ಭಾಗದಲ್ಲಿ ಜನರು ಮಳೆಯಾಧಾರಿತ ಕೃಷಿ ನಂಬಿ ಜೀವನ ಮಾಡುತ್ತಿದ್ದು, ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಎತ್ತಿನಹೊಳೆ ಯೋಜನೆ ಕುಂಟುತ್ತಾ ಸಾಗುತ್ತಿದ್ದು, ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿಸಿದ್ದೇ ಆದಲ್ಲಿ ನಾವು ನಿಮಗೆ ಬಂಗಾರದ ಬೆಳೆ ಬೇಳೆಯುತ್ತೇವೆ ಎಂದರು.

    ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ತಾಲೂಕು ಬರ ತೀವ್ರ ಬರಪೀಡಿತ ಪ್ರದೇಶವಾಗಿದ್ದು, ಈ ಭಾಗದ ಜನರಿಗೆ ಕೈಗಾರಿಕೆ, ನೀರಾವರಿ ಹಾಗೂ ಗಣಿಗಾರಿಕೆಗಳಿಲ್ಲದೆ ಜನರು ಜೀವನ ನಿರ್ವಹಣೆಗೆ ತತ್ತರಿಸುತ್ತಿದೆ. ಇದಕ್ಕೆ ಉದ್ಯೋಗ ನೀಡುವ ಕೆಲಸವಾಗಬೇಕಾಗಿದೆ ಎಂದರು

    ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ,  ಪೂಜ್ಯರ ಕಾರ್ಯಗಳು ಮುಂದಿನ ಪೀಳಿಗೆಗೆ ದಾರಿದೀಪವಾಗಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಯುವಕರು ಮತ್ತು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿರುವ ಹೆಗಡೆಯವರಿಗೆ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು.

    ವಿಧಾನ ಪರಿಷತ್ ಸದಸ್ಯ ಎಂ.ಚಿದಾನಂದ ಗೌಡ, ಪುರಸಭಾ ಅಧ್ಯಕ್ಷ ತಿಮ್ಮರಾಜು, ಧರ್ಮಸ್ಥಳ ಗ್ರಾಂಮೀಣಾಭಿವೃದ್ದಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ಮನೋಹರ್, ಪ್ರಾದೇಶಿಕ ನಿರ್ಧೇಶಕ ಎಂ.ಶೀನಪ್ಪ, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ರಾಮಚಂದ್ರ ಗುಪ್ತ, ಜಿಲ್ಲಾ ನಿರ್ದೇಶಕ ದಿನೇಶ್, ಯೋಜನಾಧಿಕಾರಿ ದಿನೇಶ್ ಕುಮಾರ್, ಚಿತ್ರದುರ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹನುಮಂತೇಗೌಡ, ಜನಮುಖಿ ಸಂಸ್ಥೆ ಅಧ್ಯಕ್ಷ ಎಲ್.ಸಿ.ನಾಗರಾಜು, ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಇದ್ದರು.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ…

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.