ಚೀನಾ ಮೊಬೈಲ್ ಉತ್ಪಾದಿಸುವ ವೀವೊ ಕಂಪನಿಯ ಮೇಲೆ ದೇಶದ 44 ಕಡೆಗಳಲ್ಲಿ ಜಾರಿನಿರ್ದೇಶನಾಲಯ ಹಠಾತ್ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೆರೆಯ ಚೀನಾದ ವ್ಯಾಪಾರದ ಮೂಲವನ್ನು ಕೇಂದ್ರಸರ್ಕಾರ ತಪಾಸಣೆ ನಡೆಸುವುದನ್ನು ಚುರುಕುಗೊಳಿಸಿರುವ ಬೆನ್ನಲ್ಲೆ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ವೀವೊ ಜತೆ ಸಂಪರ್ಕ ಹೊಂದಿರುವ ಕಂಪನಿಗಳನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಮೇ ತಿಂಗಳಿನಲ್ಲಿ ಜೆಡ್‌ಟಿಇ ಕಾರ್ಪೋರೇಷನ್ ವೀವೊ ಮೊಬೈಲ್ ಕಮ್ಯುನಿಕೇಷನ್ ನಲ್ಲಿ ನಡೆದಿರುವ ಅಕ್ರಮ ಅವ್ಯವಹಾರ ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶಿವೋಮಿ ಕಾರ್ಪೋರೇಷನ್ ಚೀನಾದ ಮತ್ತೊಂದು ಮೊಬೈಲ್ ತಯಾರಿಕಾ ಕಂಪನಿ ವಿರುದ್ಧವೂ ತನಿಖೆ ನಡೆಸಲಾಗಿದೆ.
ಮಾಲೀಕತ್ವ ಮತ್ತು ಹಣಕಾಸು ವ್ಯವಹಾರ ನಡೆದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಹೀಗಾಗಿ ಏಪ್ರಿಲ್ ತಿಂಗಳಿನಲ್ಲೂ ವಿವೋ ವಿರುದ್ಧ ತನಿಖೆ ನಡೆಸಲಾಗಿತ್ತು.
ಭಾರತ ಮತ್ತು ಚೀನಾ ನಡುವಣ ಸಂಬಂಧ ೨೦೨೦ರಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಚೀನಾ ಕಂಪನಿ ಹಾಗೂ ವಸ್ತುಗಳನ್ನು ನಿಷೇಧಿಸಲಾಗಿತ್ತು. ಪ್ರಮುಖವಾಗಿ 200ಕ್ಕೂ ಹೆಚ್ಚು ಮೊಬೈಲ್ ಆಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz