nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಪ್ರತಿಭಟಿಸುವುದು ಅಪರಾಧವೇ?: ಬಿ.ಡಿ.ಹರೇಮಠ ಬಂಧನಕ್ಕೆ ಆಕ್ರೋಶ
    ಜಿಲ್ಲಾ ಸುದ್ದಿ July 7, 2022

    ರಾಜ್ಯದಲ್ಲಿ ಪ್ರತಿಭಟಿಸುವುದು ಅಪರಾಧವೇ?: ಬಿ.ಡಿ.ಹರೇಮಠ ಬಂಧನಕ್ಕೆ ಆಕ್ರೋಶ

    By adminJuly 7, 2022No Comments1 Min Read
    hiriyuru news

    ಹಿರಿಯೂರು: ಬೇಡಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದ ಅಖಿಲ ಭಾರತ ಬೇಡ ಜಂಗಮ ಸಮಾಜ ಸಂಸ್ಥೆ ಅಧ್ಯಕ್ಷ ಬಿ.ಡಿ.ಹಿರೇಮಠರನ್ನು ಬಂಧಿಸಿರುವ ಪೋಲಿಸರ ಕ್ರಮ ಖಂಡಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

    ಹಿರಿಯೂರು ನಗರದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಯಿಸಿ ಪ್ರತಿಭಟನೆಕಾರರು ನಂತರ ತಹಶೀಲ್ದಾರರನ್ನು ಭೇಟಿಯಾಗಿ ಸರ್ಕಾರದ ಕ್ರಮದ ವಿರುದ್ಧ ಖಂಡನೆ ವ್ಯಕ್ತಪಡಿಸಿ ಮನವಿ ಸಲ್ಲಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಬೇಡ ಜಂಗಮ ಸಮಾಜದ ಮುಖಂಡ ಎಚ್. ಟಿ. ಚಂದ್ರಶೇಖರಯ್ಯ, ಸಂವಿಧಾನ ಬದ್ದ ಹಕ್ಕು ಪಡೆಯಲು ಹೋರಾಟ ನಡೆಸಿದರೆ ಪೋಲಿಸರು ಬಂಧಿಸುತ್ತಿದ್ದಾರೆ. ಬಿ.ಡಿ.ಹಿರೇಮಠ ಫ್ರೀಡಂ ಪಾರ್ಕ್ ನಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ವೇಳೆ ಆಗಮಿಸಿದ ಪೋಲಿಸರು ವಿನಾ ಕಾರಣ ಬಂಧಿಸಿದ್ದಾರೆ. ಅಲ್ಲದೇ ಅತ್ಯಂತ ಕೆಟ್ಟ ರೀತಿಯಲ್ಲಿ ಅವರನ್ನು ನಡೆಸಿಕೊಳ್ಳಲಾಗಿದೆ. ಗಲಾಟೆ ಗದ್ದಲ ಮಾಡದೆ ಗಾಂಧಿ ಮಾರ್ಗದಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ. ರಾಜ್ಯದಲ್ಲಿ ಪ್ರತಿಭಟನೆ ನಡೆಸುವುದು ಕಾನೂನು ಬಾಹಿರವೇ? ಎಂದು ಪ್ರಶ್ನಿಸಿದರು.

    ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲು ರಾಜ್ಯದ ವಿವಿಧ ಮೂಲೆಗಳಿಂದಲೂ ಸಹ ಆಗಮಿಸುತ್ತಿದ್ದ ಬೇಡ ಜಂಗಮ ಸಮಾಜದ ಬಂಧುಗಳನ್ನು ಕಳೆದ ತಿಂಗಳು 10 ರಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿಯೇ ತಡೆಯಲಾಗಿತ್ತು. ನಂತರ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.

    ಸರ್ಕಾರ ಬೇಡ ಜಂಗಮರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚಿಂತಿಸಬೇಕೆ ವಿನಾ ಹೋರಾಟ ಹತ್ತಿಕ್ಕುವ ಕೆಲಸ ಮಾಡಬಾರದೆಂದರು.

    ಈ ಸಂದರ್ಭದಲ್ಲಿ ಕೆ.ಆರ್.ವೀರಭದ್ರಯ್ಯ, ಉಮೇಶ್, ಗುಡಾಣ್ ಮಠ, ತೇಜಸ್ವಿ, ಬೇಡ ಜಂಗಮದ ಯುವ ಮುಖಂಡರ ತಾಲ್ಲೂಕು ಅಧ್ಯಕ್ಷರಾದ ಕೆ ಎಮ್ ಶಿವಕುಮಾರ ಸ್ವಾಮಿ, ಅರುಣ್ ಕುಮಾರ್, ಎಸ್.ಎಂ. ಜಗದೀಶ್, ತಿಪ್ಪೇರುದ್ರಸ್ವಾಮಿ, ಅನಿಲ್ ಕುಮಾರ್, ಚಂದ್ರಕಾಂತ್, ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್, ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.