ಕುಣಿಗಲ್ : ಬಾಯ್ಲರ್ ಗೆ ಸೌದೆ ಹಾಕುತ್ತಿದ್ದ ವ್ಯಕ್ತಿಯೊಬ್ಬರ ತಲೆಯ ಮೇಲೆ ಸೌದೆ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿ ಹೆಗ್ಗತಿಹಳ್ಳಿ ಜೆಪಿ ಡಿಸ್ಟಲರಿ ಕಾರ್ಖಾನೆಯಲ್ಲಿ ನಡೆದಿದೆ.
48 ವರ್ಷ ವಯಸ್ಸಿನ ಹೆಗ್ಗತ್ತಿಹಳ್ಳಿ ಗ್ರಾಮದ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಲಾರಿಯಿಂದ ಸೌದೆ ಇಳಿಸಿ ಬಾಯ್ಲರ್ ಗೆ ಹಾಕುವ ವೇಳೆ ಸೌದೆ ತುಂಡು ಕುಮಾರ್ ಅವರ ತಲೆಗೆ ಬಿದ್ದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ಡು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಗಾಯಗೊಂಡ ತಕ್ಷಣವೇ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz