ಪಾವಗಡ : ತಾಲ್ಲೂಕಿನ ತಪಾಗನದೊಡ್ಡಿ ಹಾಗೂ ಶ್ರೀರಂಗಾಪುರ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದ ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡರಾದ ಕೃಷ್ಣ ನಾಯ್ಕ ಅವರು ಗ್ರಾಮದಲ್ಲಿ ಇರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಡನೆ ಚರ್ಚಿಸಿದರು.
ಗ್ರಾಮದ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಗ್ರಾಮಸ್ಥರಿಗೆ ಇದೇ ವೇಳೆ ಅವರು ಭರವಸೆ ನೀಡಿದ್ದರು.
ಇದೇ ವೇಳೆ ಹಿರಿಯ ಮುಖಂಡ ಮಾಧವರೆಡ್ಡಿ, ಮಂಡಲ ಉಪಾಧ್ಯಕ್ಷ ನಾರಾಯಣಪ್ಪ, ಬಿಜೆಪಿ ಪದಾಧಿಕಾರಿಗಳಾದ ರೈತ ಮೋರ್ಚಾ ಮಂಡಲ ಅಧ್ಯಕ್ಷರು ಕೋಟೇಶ್ವರರೆಡ್ಡಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿ ನಾಯ್ಕ, ಯುವ ಮುಖಂಡರಾದ ಮಣಿ ಮತ್ತು ವಸಂತ ನಾಯ್ಕ, ಕೃಷ್ಣಮೂರ್ತಿ, ಸೇರಿದಂತೆ ಗ್ರಾಮದ ಯುವಕರು, ಹಿರಿಯರು, ಕಿರಿಯರು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz