ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ತಮ್ಮನ ಮೃತದೇಹವನ್ನು ತೊಡೆಯ ಮೇಲೆ ಮಲಗಿಸಿಕೊಂಡು ಕಾಯುತ್ತಾ ಕುಳಿತ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಶನಿವಾರ ಮಧ್ಯಪ್ರದೇಶದ ಮೊರೆನಾ ಬೀದಿಯಲ್ಲಿ ಎಂಟು ವರ್ಷದ ಬಾಲಕ ತನ್ನ ಎರಡು ವರ್ಷದ ಕಿರಿಯ ಸಹೋದರನ ಶವದೊಂದಿಗೆ ಅಸಹಾಯಕತೆಯಿಂದ ಕುಳಿತಿದ್ದು, ಭಾರತದಲ್ಲಿರುವ ಬಡತನದ ಇನ್ನೊಂದು ಮುಖದ ಪರದೆ ಸರಿಸಿದಂತೆ ಕಂಡು ಬಂದಿದೆ.
ಪೂಜಾರಾಮ್ ಜಾಧವ್ ತನ್ನ ಕಿರಿಯ ಮಗ ರಾಜಾ(2) ಮೊರೆನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ರಕ್ತಹೀನತೆಯಿಂದಾಗಿ ಆತ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಎತ್ತ ಕೊಂಡೊಯ್ಯಬೇಕು ಎನ್ನುವುದು ತಿಳಿಯದೇ ಬಾಲಕ ತನ್ನ ಮಡಿಲಲ್ಲೇ ಇಟ್ಟುಕೊಂಡು ಕುಳಿತುಕೊಂಡಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz