ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಜತೆ ರಾಜಕುಮಾರ ಚಿತ್ರದಲ್ಲಿ ನಟಿಸಿದ್ದ ನಟಿ ಪ್ರಿಯಾ ಆನಂದ್ ನಿತ್ಯಾನಂದನ ಜತೆ ವಿವಾಹವಾಗುವುದಾಗಿ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಪ್ರಿಯಾ ಆನಂದ್ ಇತ್ತೀಚೆಗೆ ಯು ಟೂಬ್ ಚಾನಲ್‌ಗೆ ಸಂದರ್ಶನ ನೀಡಿರುವ ವೇಳೆ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ನಾನು ನಿತ್ಯಾನಂದ ಸ್ವಾಮಿ ಅವರೊಂದಿಗೆ ಮದುವೆಯಾಗಬೇಕು ಎಂದು ಬಯಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ನಿತ್ಯಾನಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿ ಅವರ ವಿರುದ್ಧ ಆರೋಪಗಳು ಕೇಳಿ ಬಂದಿವೆ. ಆದರೆ, ಅವರನ್ನು ಹಿಂಬಾಲಿಸುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಪ್ರಿಯಾ ಆನಂದ್ ಈ ಹೇಳಿಕೆಯನ್ನೇ ಹಂಚಿಕೊಂಡರು. ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ನಿತ್ಯಾನಂದನನ್ನು ಮದುವೆಯಾಗುವುದಾಗಿ ಹೇಳಿದ್ದಾರೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಭಾಷೆಯ ಸಿನಿಮಾಗಳಲ್ಲಿ ಪ್ರಿಯಾ ಆನಂದ್, ದೊಡ್ಡ ಅಭಿಮಾನಿಗಳನ್ನು ಹೊಂದಿದ್ದು, ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಚಿತ್ರದಲ್ಲೂ ಅವರು ನಟಿಸಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


