ಕಾಫಿನಾಡಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಮರ ಕುಸಿದು ಬಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ಈ ಬೃಹತ್ ಗಾತ್ರದ ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ.
ಆದರೆ, ವಾಹನ ಸವಾರರು ಪರದಾಡುವಂತಾಗಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಚಾರ್ಮಾಡಿ ಘಾಟ್‌ನ ೮ನೇ ತಿರುವಿನಲ್ಲಿ ಮರ ಬಿದ್ದ ಕಾರಣ ೧ ಕಿ.ಮೀ.ಗೂ ಹೆಚ್ಚಯ ಟ್ರಾಫಿಕ್‌ಜಾಮ್ ಆಗಿದೆ.
ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗುಡ್ಡೆತೋಟ ಗ್ರಾಮದ ರಸ್ತೆಯ ಮೇಲೆ ಗುಡ್ಡ ಕುಸಿದಿದೆ. ಇದರಿಂದಾಗಿ ಹೊರನಾಡು-ಶೃಂಗೇರಿ ಮಾರ್ಗದ ಸಂಚಾರ ಅಸ್ತವ್ಯಸ್ತಗೊಂಡಿದೆ.
ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಪರಿಹಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ. ೪-೫ ಮನೆಗಳ ಮೇಲೆ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಕೂಲಿ ಕಾರ್ಮಿಕರು ಆತಂಕದಲ್ಲಿದ್ದಾರೆ.
ಚಂದ್ರ-ದ್ರೋಣ ಪರ್ವತ ಶ್ರೇಣಿಯಲ್ಲಿ ಧಾರಾಕಾರ ಮಳೆಯಿಂದಾಗಿ ಮರ, ಮಣ್ಣು, ಬಂಡೆಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಕೊಳಗಾಮೆ-ಮುತ್ತೋಡಿ ಸಂಪರ್ಕ ಕಲ್ಪಿಸುವ ಗಿರಿ ಭಾಗದ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಇನಾಮ್ ದತ್ತಾತ್ರೇಯ ಪೀಠಕ್ಕೆ ತೆರಳುವ ರಸ್ತೆಯಲ್ಲೂ ಮುಕ್ಕಾಲು ಭಾಗಕ್ಕೆ ಗುಡ್ಡ ಕುಸಿತವಾಗಿದೆ. ಇದರಿಂದಾಗಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


