ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಲ್ಲಿಗೆ ಸಮೀಪದ ಸಂತೆಕಟ್ಟೆ ಕೆ.ಜಿ .ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.12ರಂದು ನಡೆದಿದೆ. ಘಟನೆಯಲ್ಲಿ ಎಸ್ಕಾರ್ಟ್ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಸಚಿವ ಕೋಟ ಅವರ ಬೆಂಗಾವಲು ವಾಹನದ ಮುಂದೆ ಸಂಚರಿಸುತಿದ್ದ ಲಾರಿ ಸೂಚನೆ ನೀಡದೆ ಏಕಾಏಕಿ ಪಥ ಬದಲಿಸಿದ ಕಾರಣ, ಚಾಲಕನ ನಿಯಂತ್ರಣ ತಪ್ಪಿ ವಾಹನ ಡಿವೈಡರ್ ಮೇಲೆ ಪಲ್ಟಿಯಾಗಿದೆ.
ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅವರನ್ನು , ಸಚಿವ ಕೋಟ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


