ತುಮಕೂರು: ಮಳೆ ನೀರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಘಟನೆ ಹಿನ್ನೆಲೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಅರಗ ಜ್ಞಾನೇಂದ್ರ ತುಮಕೂರಿಗೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ಆಟೋ ಚಾಲಕ ಇನ್ನೂ ಪತ್ತೆಯಾಗಿಲ್ಲ. ಆಟೋ ಚಾಲಕ ಪತ್ತೆಯಾದ ಬಳಿಕ ಮುಂದಿನ ಕ್ರಮಕೈಗೊಳ್ಳೋಣ. ವ್ಯಕ್ತಿ ಮೊದಲು ಬದುಕಿದ್ದಾನೆ ಅಂದುಕೊಳ್ಳೋಣ. ವ್ಯಕ್ತಿ ಪತ್ತೆಯಾಗುವವರೆಗೂ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಹಿನ್ನೆಲೆಯಲ್ಲಿ ತುಮಕೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕ ಕಾಮಕಾರಿಗಳು ನಡೆಯುತ್ತಿದ್ದು, ಇದೀಗ ಇದರ ಫಲವಾಗಿ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. ಈ ಬಗ್ಗೆ ಯಾವ ಕ್ರಮಕೈಗೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿ ಮಳೆ ನೀರು ತುಂಬಿತ್ತು ಎಂದು ಮಾಹಿತಿ ಇದೆ. ಅದನ್ನು ಸರಿಪಡಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು.
ತುಮಕೂರಿನ ವಿವಿಧ ಪ್ರದೇಶಗಳಲ್ಲಿರುವ ಅಂಡರ್ ಪಾಸ್ ಗಳಲ್ಲಿ ಇದೇ ರೀತಿಯ ಸಮಸ್ಯೆಗಳಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಇವೆಲ್ಲ ಮಾಡಿದ್ದಾರೆ. ಈ ಕೆಲಸಗಳು ಫಿನಿಷಿಂಗ್ ಸ್ಟೇಜ್ ನಲ್ಲಿವೆ. ಅಲ್ಲದೇ ರೈಲ್ವೇ ಇಲಾಖೆಯ ಪ್ರದೇಶವಾಗಿರುವುದರಿಂದ ನಾವೇನು ಮಾಡಲು ಆಗುವುದಿಲ್ಲ. ರೈಲ್ವೆ ಅಧಿಕಾರಿಗಳನ್ನು ಕರೆದು ಮಾತನಾಡಿ ಸರಿ ಮಾಡುವ ಕೆಲಸ ನಾವು ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz