ಮಂಡ್ಯ: ಸಾಹಿತಿ ದೇವನೂರು ಮಹಾದೇವ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿ, ಸಂಸದ ಪ್ರತಾಪ ಸಿಂಹ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ಹೊರಹಾಕಿದರು.
ದೇವನೂರು ಮಹಾದೇವ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಪ್ರತಾಪ ಸಿಂಹ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇದೇ ವೇಳೆ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


