ಮಧುಗಿರಿ: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ದೊಡ್ಡೇರಿ ಗ್ರಾಮದ ಜಮೀನಿನಲ್ಲಿ ಮೇಯುತಿದ್ದ ಎರಡು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಎರಡು ಮೇಕೆ ಸ್ಥಳದಲ್ಲೇ ಮೃತಪಟ್ಟಿವೆ.
ತಾಲೂಕಿನ ದೊಡ್ಡೇರಿ ಗ್ರಾಮದ ರಂಗನಾಥಪ್ಪನವರಿಗೆ ಸೇರಿದ ಮೇಕೆಗಳಾಗಿದ್ದು, ಸುಮಾರು ಮೂವತ್ತು ಸಾವಿರ ನಷ್ಟವಾಗಿದೆ ಎಂದು ಮಾಲೀಕ ಊರಿನ ಗ್ರಾಮಸ್ಥರು ತಿಳಿಸಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿದ್ದರು. ಈ ವೇಳೆ ನಮಗೆ ಪರಿಹಾರ ನೀಡಬೇಕು ಎಂದು ಮಾಲೀಕರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಊರಿನ ಗ್ರಾಮಸ್ಥರಾದ ರಂಗನಾಥಪ್ಪ ಜಯಕುಮಾರ್ ರವೀಶ್ ಅಪ್ಪು ಕಾಂತು ಕಾಟ್ಮೆ ಲಿಂಗಯ್ಯ ಮೊದಲಾದವರು ಪರಿಹಾರ ಕೋರಿ ಮನವಿ ಸಲ್ಲಿಸಿದ್ದಾರೆ.
ವರದಿ: ದೊಡ್ಡೇರಿ ಮಹಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz