nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸ್ಸೂ ಇಲ್ಲ, ಪಾಸೂ ಇಲ್ಲ: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
    ಜಿಲ್ಲಾ ಸುದ್ದಿ July 21, 2022

    ಬಸ್ಸೂ ಇಲ್ಲ, ಪಾಸೂ ಇಲ್ಲ: ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

    By adminJuly 21, 2022No Comments2 Mins Read
    bus problem

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಿಂದ ಹೊರವಲಯದಲ್ಲಿರುವ ಶಾಲಾ  ಕಾಲೇಜಿನ ವಿದ್ಯಾರ್ಥಿಗಳಿಗೆ  ಸರಿಯಾದ ಸಮಯಕ್ಕೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬುಧವಾರ ಹಿರಿಯೂರು ನಗರದ ಸಾರಿಗೆ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳು  ಬಸ್‌ ತಡೆದು ಆಕ್ರೋಶ ವ್ಯಕ್ತಪಡಿಸಿದರು.

    ಶಾಲಾ-ಕಾಲೇಜು ಪ್ರಾರಂಭವಾಗಿ ತಿಂಗಳು ಕಳೆದರೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಪಟ್ಟಣ ಪ್ರದೇಶಗಳ ವಿದ್ಯಾಭ್ಯಾಸಕ್ಕೆ ತೆರಳಲು ಸಕಾಲಿಕ ಬಸ್‌ ವ್ಯವಸ್ಥೆ ಮಾಡಿಕೊಟ್ಟಿಲ್ಲ ಎಂದು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಮತ್ತು ಸಾರಿಗೆ ಸಂಸ್ಥೆಯ ಆಡಳಿತ ಅಧಿಕಾರಿಗಳ ಮೇಲೆ  ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಚಿತ್ರದುರ್ಗ ಹಾಗೂ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾರಂಭವಾಗಿದ್ದು, ಈ ಕಾಲೇಜು ಹಿರಿಯೂರು ನಗರದಿಂದ ಸುಮಾರು 7 ಕಿಲೋ ಮೀಟರ್ ದೂರದಲ್ಲಿದ್ದು, ಈ ವಿದ್ಯಾಸಂಸ್ಥೆಗೆ ಸುಮಾರು ಐದುನೂರಕ್ಕಿಂತಲೂ ಹೆಚ್ವು ವಿದ್ಯಾರ್ಥಿಗಳು ಬರುತ್ತಿದ್ದು , ಅದರಲ್ಲೂ ಸಹ ಅತಿ ಹೆಚ್ಚಾಗಿ ಹಿರಿಯೂರು ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮೀಣ ಭಾಗದಿಂದ ಹಾಗೂ ಚಿತ್ರದುರ್ಗದಿಂದಲೂ ಸಹ ವಿದ್ಯಾರ್ಥಿಗಳು ಅತಿ ಹೆಚ್ವಿನ ಸಂಖ್ಯೆಯಲ್ಲಿಕಾಲೇಜಿಗೆ ಬರುವ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಆದರೆ ಈ ಮಾರ್ಗವಾಗಿ ಸರ್ಕಾರವು ನಮಗೆ ಯಾವುದೇ ಬಸ್ ವ್ಯವಸ್ಥೆ ಕಲ್ಪಿಸಿಕೊಡದೆ ಇಂದಿನ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜೊತೆಯಲ್ಲಿ ಆಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಲ್ಲಿ ಸರಿಯಾದ ಬಸ್ ನಿಲ್ದಾಣ ವ್ಯವಸ್ಥೆಯೇ ಇಲ್ಲ. ಮಾತ್ರವಲ್ಲದೇ ಬಸ್ ಪಾಸ್ ವ್ಯವಸ್ಥೆ ಕೂಡ ಮಾಡಿಕೊಟ್ಟಿಲ್ಲ. ಬಸ್ ನ ಸಂಪರ್ಕವಿಲ್ಲದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕಾಲೇಜು ನಗರದಿಂದ ಹೊರವಲಯದಲ್ಲಿ ಇರುವುದರಿಂದ ವಿದ್ಯಾರ್ಥಿಗಳು ನಡೆದುಕೊಂಡು ಹೋಗುವುದಕ್ಕೆ ಹರಸಾಹಸ ಪಡುವಂತಹ ಪರಿಸ್ಥಿತಿಗಳು ಉಂಟಾಗಿದೆ ಎಂದು ಅಳಲು ತೋಡಿಕೊಂಡರು.

    ಆದರಿಂದ ಸ್ಥಳೀಯ ಶಾಸಕರು ಹಾಗೂ ಸಾರಿಗೆ ಸಂಸ್ಥೆಯ ಸಚಿವರು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ವಿದ್ಯಾರ್ಥಿಗಳಿಗೆ  ಅನುಕೂಲ ಮಾಡಿಕೊಡಬೇಕು. ಈ ಭಾಗಕ್ಕೆ ಬಸ್ ವ್ಯವಸ್ಥೆ ಹಾಗೂ ಬಸ್ ಪಾಸ್ ಮಾಡಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಗಣಕಿಸಹಾಯಕರು , ಹಿರಿಯೂರು ನಗರ ಪೋಲಿಸ್ ಠಾಣೆಯ  ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     

    admin
    • Website

    Related Posts

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.