ತುಮಕೂರು: ನಗರದ ಅಮಾನಿಕೆರೆ ಮುಂಭಾಗ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ನಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಅಮಾನಿಕೆರೆ ಮುಂಭಾಗ ಇಟ್ಟಿದ್ದ ಮೋರಿ ಪೈಪ್ ಗೆ ಗುದ್ದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರನ ಮಾಹಿತಿಗಳು ಇನ್ನೂ ತಿಳಿದು ಬಂದಿಲ್ಲ. ಅತೀವೇಗದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತಕ್ಕೀಡಾದ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz