ಮಧುಗಿರಿ: ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಶಿವಾನಂದ ಪ್ರೌಢಶಾಲೆ ಬೀಜವರ ಶಾಲೆಗೆ ಪೋಷಕರು ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಮುಖ್ಯ ಶಿಕ್ಷಕರಾದ ರಾಮಕೃಷ್ಣಯ್ಯನವರನ್ನು ತುಂಬಾಡಿ ಪ್ರೌಢ ಶಾಲೆಗೆ ವರ್ಗಾವಣೆ ಮಾಡಲಾಗಿದ್ದು, ಅವರು ನಮ್ಮ ಶಾಲೆಗೆ ಬೇಕು ಎಂದು ಒತ್ತಾಯಿಸಿದ ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ಶಾಲೆ ಮುಂಭಾಗದಲ್ಲಿ ಧರಣಿ ನಡೆಸಿದರು.
ಇದೇ ವೇಳೆ ಶಿಕ್ಷಣ ಇಲಾಖೆಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಶಿವಾನಂದ ಪ್ರೌಢಶಾಲೆಗೆ ರಾಮಕೃಷ್ಣಯ್ಯ ಅವರನ್ನು ಮರು ನೇಮಕ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz