ಚೆನ್ನೈ, ತಮಿಳು ನಾಡಿನಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು ಕಳೆದ ರಾತ್ರಿ ಶಿವಕಾಶಿಯಲ್ಲಿ ಪ್ರಥಮ ಪಿ ಯು ಸಿ ತರಗತಿಯ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ವಿದ್ಯಾರ್ಥಿನಿಯ ಕುಟುಂಬದ ಪ್ರಕಾರ ಆಕೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ.ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆದರೂ ಈಕೆಯ ಸಾವಿನ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ.
ಕಳೆದ ಒಂದು ವಾರದಲ್ಲಿ ಸುಮಾರು 4 ವಿದ್ಯಾರ್ಥಿನಿಗಳು ಆತ್ಮಹತ್ಯೆಗೆ ಶರಣಾಗಿದ್ದು ತಮಿಳುನಾಡು ಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ. ಎಲ್ಲಾ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುತ್ತಿದ್ದು, ವಿಚಾರಣೆ ಹಂತದಲ್ಲೆ ಇದ್ದು, ಪೋಷಕರು, ಸಂಬಂಧಿಕರು ಹಾಗೂ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ.
ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅವರು ವಿದ್ಯಾರ್ಥಿಗಳಿಗೆ ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡಿದ್ದಾರೆ. ಬಾಲಕಿಯರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆಯನ್ನು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy