nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದ ಆದೇಶದಂತೆ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಲಾಗುವುದು: ನಾಹಿದಾ ಜಮ್ ಜಮ್
    ಕೊರಟಗೆರೆ July 30, 2022

    ಸರ್ಕಾರದ ಆದೇಶದಂತೆ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಲಾಗುವುದು: ನಾಹಿದಾ ಜಮ್ ಜಮ್

    By adminJuly 30, 2022No Comments3 Mins Read
    koratagere

    Provided by
    Provided by

    ಕೊರಟಗೆರೆ: ಸಾರ್ವಜನಿಕವಾಗಿ ಹಿಂದು ಸ್ಮಶಾನವಾಗಿ ಎಲ್ಲಾ ಸಮುದಾಯದವರಿಗೂ ಒಂದೇ ಸ್ಮಶಾನ ಎಂಬ ಸರ್ಕಾರದ ಆದೇಶದಂತೆ ಮುಂದಿನ ದಿನಗಳಲ್ಲಿ ಪಟ್ಟಣ ಹಾಗೂ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸರ್ಕಾರಿ ಜಮೀನುಗಳಲ್ಲಿ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಲಾಗುವುದು ಹಾಗೂ ದಲಿತ ಮುಖಂಡರ ಮನವಿ ಮೇರೆಗೆ ಪ್ರತ್ಯೇಕ ಸ್ಮಶಾನ ಮಂಜೂರಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು.

    ಕೊರಟಗೆರೆ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗದ ಹಿತರಕ್ಷಣಾ ಸಮಿತಿ ಸಬೆಯ ಅಧ್ಯಕ್ಷತೆ ವಹಿಸಿದ್ದ ಅವರು,  ದಲಿತ ಮುಖಂಡ ದಾಡಿ ವೆಂಕಟೇಶ್ ರವರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಪ್ರತ್ಯೇಕ ಸ್ಮಶಾನಕ್ಕೆ ಮನವಿಯ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದರು.

    ಸಾರ್ವಜನಿಕವಾಗಿ ಎಲ್ಲಾ ಸಮುದಾಯದವರಿಗೂ ಒಂದೇ ಸ್ಮಶಾನ ಎಂಬ ಸರ್ಕಾರದ ಆದೇಶವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಪಟ್ಟಣ ಹಾಗೂ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗ ಳೊಂದಿಗೆ ಸರ್ಕಾರಿ ಜಮೀನುಗಳಲ್ಲಿ ಹಿಂದು ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಲಾಗುವುದು ಹಾಗೂ ದಲಿತ ಮುಖಂಡರ ಮನವಿ ಮೇರೆಗೆ ಸರ್ಕಾರದ ಆದೇಶ ರದ್ದುಪಡಿಸಿ ಪರಿಶಿಷ್ಠ ಜಾತಿ ಮತ್ತು ವರ್ಗಕ್ಕ ಪ್ರತ್ಯೇಕ ಸ್ಮಶಾನ ಮಂಜೂರಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಈಗಾಗಲೆ ದಾಸರಹಳ್ಳಿ ಗ್ರಾಮದ ಸ.ನಂ. 23 ನಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಮೀನನ್ನು ಮತ್ತು ಅಕ್ಕಿರಾಂಪುರ ಗ್ರಾಮದ ಸ.ನಂ. 42/4ಎ,4ಬಿ ಗೆ ಸಂಬಂಧಿಸಿದಂತೆ ಒತ್ತುವರಿಯಾಗಿರುವ ಪ್ರದೇಶವನ್ನು ತೆರೆವುಗೊಳಿಸಿ ಪಂಚಾಯಿತಿ ಅವರಿಗೆ ಹಸ್ತಾಂತರಿಸಲಾಗಿರುತ್ತದೆ ಎಂದು ತಿಳಿಸಿದರು.


    Provided by
    Provided by

    ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭಾಗ್ಯಮ್ಮ ಮಾತನಾಡಿ, ಪಟ್ಟಣ ಪಂಚಾಯಿತಿ ಆದಾಯದಲ್ಲಿ ಗುತ್ತಿಗೆ ನೌಕರರ ವೇತನ, ಸರ್ಕಾರಕ್ಕೆ ಪಾವತಿಸಬೇಕಾದ ಕರಗಳು ಮತ್ತು ತೆರಿಗೆಗಳು ಹಾಗೂ ಕಛೇರಿಯ ಆಡಳಿತಾತ್ಮಕ ವೆಚ್ಚಗಳನ್ನು ಕಳೆದು ಉಳಿದ ಮೊತ್ತದಲ್ಲಿ ಶೇ.24.10, ಶೇ.7.25 ಹಾಗೂ ಶೇ.5 ರಷ್ಟು ಮೀಸಲಿಡಲಾಗಿದೆ ಎಂದರು.

    2021-22 ನೇ ಸಾಲಿನಲ್ಲಿ ಎಸ್.ಎಫ್.ಸಿ. ಅನುದಾನ ಶೇ.24.10 ರಲ್ಲಿ ಕ್ರಿಯಾ ಯೋಜನೆ ತಯಾರಿಸಿ ಅಂಬೇಡ್ಕರ್ ಜಯಂತಿಗೆ 20 ಸಾವಿರ ಮೀಸಲಾಗಿರಿಸಿದ್ದು, ಅದರಂತೆ ಸದರಿ ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

    2018-19 ನೇ ಸಾಲಿನ ವರೆಗೆ ಕೆ.ಆರ್.ಐ.ಡಿ.ಎಲ್ ಇಲಾಖೆಗೆ ಕಾಮಗಾರಿಗಳನ್ನು ಕೈಗೊಳ್ಳಲು ಮೇಲಾಧಿಕಾರಿಗಳು ಅನುಮೋದನೆ ನೀಡಿದ್ದು, ಅದರಂತೆ ಕಾಮಗಾರಿಗಳನ್ನು ಕೈಗೊಂಡಿರುತ್ತಾರೆ, 2019-20 ಮತ್ತು 2021-22 ನೇ ಸಾಲಿನ ಕಾಮಗಾರಿಗಳನ್ನು ನಿಗಮದ ವತಿಯಿಂದಲೇ ಅನುಷ್ಠಾನಗೊಳಿಸಲು ಅನುದಾನ ಒದಗಿಸಿದ್ದು, ಅದರಂತೆ ಕೆ.ಟಿ.ಪಿ.ಪಿ ನಿಯಗಳನ್ವಯ ಕಾಮಗಾರಿಗಳನ್ನು ಟೆಂಡರ್ ಆಹ್ವಾನಿಸಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ದಾಸರಹಳ್ಳಿ ಮಂಜುನಾಥ್ ತಾಲೂಕಿನಲ್ಲಿ ಪರಿಶಿಷ್ಠ ಜಾತಿ ಮತ್ತು ವರ್ಗದ ಜನಾಂಗದ ಮೇಲೆ ಮದ್ಯಪಾನ ಮಾರಾಟ ಮಾಡುತ್ತಾರೆ ಎಂದು ಅಬಕಾರಿ ನಿರೀಕ್ಷಕರು ಕೇಸ್ ದಾಖಲಿಸಿ, ಹಿಂಸೆ ನೀಡುತ್ತಿದ್ದಾರೆ. ತಾಲೂಕಿನಲ್ಲಿ ಎಷ್ಟು ಮದ್ಯದ ಅಂಗಡಿಗಳಿವೆ ಎಂಬ ಪ್ರಶ್ನೆಗೆ ಅಬಕಾರಿ ನಿರೀಕ್ಷಕಿ ಶ್ರೀಲತಾ ಮಾಹಿತಿ ನೀಡಿ, ತಾಲೂಕಿನಲ್ಲಿ ಮನೆಗಳಲ್ಲಿ, ಚಿಲ್ಲರೆ ಅಂಗಡಿ, ಪೆಟ್ಟಿಗೆ ಅಂಗಡಿಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವವರ ಮೇಲೆ ಅನಿರೀಕ್ಷಿತ ದಾಳಿ ಮಾಡಿ  ಜನವರಿ 2021 ರಿಂದ ಅಕ್ಟೋಬರ್ 2021 ವರೆಗೆ 218 ದಾಳಿ ನಡೆಸಿ ಅಕ್ರಮ ಮಧ್ಯಮಾರಾಟ ಮಾಡುವವರ ವಿರುದ್ದ 16 ಕಠಿಣ ಪ್ರಕರಣ ದಾಖಲಿಸಿ, 147 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, 1194.310 ಲೀಟರ್ ಮಧ್ಯ, 4.300 ಲೀ ಬಿಯರ್, 32 ಲೀಟರ್ ಸೇಂದಿ ಮತ್ತು 1.650 ಕಿ.ಲೋ ಗ್ರಾಂ ಗಾಂಜಾವನ್ನು ಜಪ್ತುಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

    ದಂಡದ ಹಣ 6,08,500 ರೂಗಳನ್ನು ಸರ್ಕಾರಕ್ಕೆ ಸಂದಾಯ ಮಾಡಿಸಲಾಗಿದೆ. ಪ್ರಕರಣಗಳು ದಾಖಲಿಸುವಾಗ ಮೇಲ್ವರ್ಗ, ಕೆಳವರ್ಗ, ಪರಿಶಿಷ್ಟ ಜಾತಿ, ವರ್ಗ ಎಂಬ ಜಾತಿ ಬೇಧ ವಿಂಗಡಿಸದೇ ಕೃತ್ಯ ನಡೆದ ಅನುಸಾರವಾಗಿ ಪ್ರಕರಣ ದಾಖಲಿಸಲಾಗಿದೆ. ಕೊರಟಗೆರೆ ವಲಯ ವ್ಯಾಪ್ತಿಯಲ್ಲಿ ಒಟ್ಟು 22 ಮಧ್ಯದಂಗಡಿಗಳು ಕಾರ್ಯನಿರ್ವಹಿಸುತ್ತಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಬೆಸ್ಕಾಂ ಇಎಎ ಮಲ್ಲಣ್ಣ ಸಭೆಯಲ್ಲಿ ಮಾಹಿತಿ ನೀಡಿ ಸರ್ಕಾರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಟುಂಬಕ್ಕೆ ಮಾಸಿಕ 75 ಯೂನಿಟ್ ಗಳವರೆಗಿನ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗಿದ್ದು, ಅರ್ಹ ಫಲಾನುಭವಿಗಳು ಬಿಪಿಎಲ್ ರೇಷಣ್ ಕಾರ್ಡ್(ಆರ್.ಸಿ.ಸಮಖ್ಯೆ ಸಹಿತ), ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಐಎಫ್ ಎಸ್‍ ಸಿ ಕೋಡ್ ಸಹಿತ ಪಾಸ್ ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಬೆಸ್ಕಾಂ ಇಲಾಖೆ ಅರ್ಜಿನಮೂನೆಯೊಂದಿಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಹಿತಿ ನೀಡಿದರು.

    ಸಭೆಯಲ್ಲಿ ಸರ್ಕಾರಿ ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆಯಾಗಿಲ್ಲ ಸಮಾಜ ಕಲ್ಯಾಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

    ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ.ದೊಡ್ಡಸಿದ್ದಪ್ಪ, ಸಮಾಜಕಲ್ಯಾಣಾದಿಕಾರಿ ಉಮಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಪಿಎಸೈ ನಾಗರಾಜು, ಜಿ.ಪಂ ಎಇಇ ರವಿಕುಮಾರ್, ಬೆಸ್ಕಾಂ ಎಇಇ ಮಲ್ಲಣ್ಣ, ಕೃಷಿ ಸಹಾಯಕ ನಿರ್ದೇಶಕ ನಾಗರಾಜು, ಟಿಹೆಚ್‍ ಓ ಡಾ.ವಿಜಯ್‍ಕುಮಾರ್, ಸಿದ್ದನಗೌಡ , ಅಂಬಿಕಾ, ಸುರೇಶ್ , ಭಾಗ್ಯಮ್ಮ, ಮುಖಂಡರುಗಳಾದ ಪ.ಪಂ.ಸದಸ್ಯ ಪುಟ್ಟನರಸಪ್ಪ, ವಿನಯ್‍ ಕುಮಾರ್, ರಮೇಶ್, ದಾಡಿ ವೆಂಕಟೇಶ್, ಅಗ್ರಹಾರ ನಾಗರಾಜು, ಮಲ್ಲೇಕಾವು ರಮೇಶ್ ಸೇರಿದಂತೆ ಇನ್ನಿತರ ಇಲಾಖಾ ಅಧಿಕಾರಿಗಳು, ಮುಖಂಡರುಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್…

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.